HomeLatest Newsನಿಖರ ಗುರಿ ತಲುಪುವ ಸೇನಾ ಸಾಮರ್ಥ್ಯ ಮತ್ತಷ್ಟು ಹೆಚ್ಚಳ: ಡ್ರೋನ್ ಮೂಲಕ ಕ್ಷಿಪಣಿ ಪರೀಕ್ಷೆ ಯಶಸ್ವಿ

ನಿಖರ ಗುರಿ ತಲುಪುವ ಸೇನಾ ಸಾಮರ್ಥ್ಯ ಮತ್ತಷ್ಟು ಹೆಚ್ಚಳ: ಡ್ರೋನ್ ಮೂಲಕ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ಡ್ರೋನ್ ಮೂಲಕ ನಿರ್ದಿಷ್ಟ ಪ್ರದೇಶದ ಮೇಲೆ ದಾಳಿ ನಡೆಸುವ ಕ್ಷಿಪಣಿ ಪರೀಕ್ಷೆಯನ್ನು ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ(ಡಿ.ಆರ್.ಡಿ.ಒ.) ಶುಕ್ರವಾರ ಯಶಸ್ವಿಯಾಗಿ ನಡೆಸಿದ್ದು, ಇದರೊಂದಿಗೆ ನಿಖರ ಗುರಿ ತಲುಪುವಲ್ಲಿ ದೇಶದ ಸೇನಾ ಸಾಮರ್ಥ್ಯ ಮತ್ತಷ್ಟು ಹೆಚ್ಚಾಗಿದೆ.

ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವತಿಯಿಂದ ಅಭಿವೃದ್ಧಿಪಡಿಸಿದ ಉಡಾವಣಾ ಪಥ ನಿರ್ದೇಶಿತ ಕ್ಷಿಪಣಿ ಯುಎಲ್‌ಪಿಜಿಎಂ-ವಿ3 ಪರೀಕ್ಷೆಯನ್ನು ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ.

ಯಾವುದೇ ವೈಮಾನಿಕ ಪರಿಸ್ಥಿತಿಯಲ್ಲಿ ಯುಎಲ್‌ಪಿಜಿಎಂ-ವಿ3 ಉಡಾವಣೆ ವ್ಯವಸ್ಥೆಯನ್ನು ಬಳಕೆ ಮಾಡಿಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದ್ದು, ನಿಖರವಾಗಿ ಗುರಿ ತಲುಪುವಂತೆ ಹಗುರ ಮಾದರಿಯ ಯುದ್ಧ ಸಾಧನವಾಗಿ ಇದನ್ನು ರೂಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೈರ್ ಅಂಡ್ ಫರ್ಗೆಟ್ ಮಾದರಿಯ ಗಾಳಿಯಿಂದ ಭೂಮಿಗೆ ಹಾರಬಲ್ಲ ಕ್ಷಿಪಣಿ ಇದಾಗಿದ್ದು, ಹಗಲಿನಲ್ಲಿ 4 ಕಿಲೋಮೀಟರ್, ರಾತ್ರಿಯಲ್ಲಿ 2.5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗುರಿ ಹೊಡೆಯುವ ಸಾಮರ್ಥ್ಯ ಹೊಂದಿದೆ. ಭೂಗತವಾಗಿಯೂ ನುಗ್ಗಿ ಬಂಕರ್ ಗಳನ್ನು ನಾಶಪಡಿಸುವ ಸಾಮರ್ಥ್ಯ ಹೊಂದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular