HomeKarnatakaBIG NEWS: ಡಿಆರ್ ಡಿಒ ಯುವ ವಿಜ್ಞಾನಿ ಆತ್ಮಹತ್ಯೆ

BIG NEWS: ಡಿಆರ್ ಡಿಒ ಯುವ ವಿಜ್ಞಾನಿ ಆತ್ಮಹತ್ಯೆ

ಮಂಗಳೂರು: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ-ಡಿಆರ್ ಡಿಒದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವ ವಿಜ್ಞಾನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಭರತ್ ಕಲ್ಲರ್ಪೆ (24) ಮೃತ ದುರ್ದೈವಿ. ಪುತ್ತೂರಿನ ಕಲ್ಲರ್ಪೆ ನಿವಾಸಿಯಾಗಿದ್ದ ಭರತ್, ಹೈದರಾಬಾದ್ ನಲ್ಲಿ ಡಿಆರ್ ಡಿಒ ಸಂಸ್ಥೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡು ತಿಂಗಳ ಹಿಂದಷ್ಟೇ ಕೆಲಸಕ್ಕೆ ಸೇರಿದ್ದ ಭರತ್ ವಾರದ ಹಿಂದೆ ಪುತ್ತೂರಿಗೆ ವಾಪಾಸ್ ಆಗಿದ್ದರು. ಬಳಿಕ ಕೆಲಸಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಸಂಸ್ಥೆ ಭರತ್ ರಾಜೀನಾಮೆಯನ್ನು ಒಪ್ಪಿರಲಿಲ್ಲ ಎಂದು ತಿಳಿದುಬಂದಿದೆ. ಅಲ್ಲದೇ ಡಿ.14, ನಿನ್ನೆ ರಾತ್ರಿ ಭರತ್ ಗೆ ಸಂಸ್ಥೆಯಿಂದ ಕರೆ ಬಂದಿತ್ತು ಎನ್ನಲಾಗಿದೆ. ಇಂದು ಬೆಳಿಗ್ಗೆ ನೋಡಿದರೆ ಭರತ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಯುವ ವಿಜ್ಞಾನಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular