HomeKarnatakaಪ್ರಸಿದ್ಧ ಬಿಂಡಿಗ ದೇವಿರಮ್ಮ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ಪ್ರಸಿದ್ಧ ಬಿಂಡಿಗ ದೇವಿರಮ್ಮ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಪ್ರಸಿದ್ಧ ಬಿಂಡಿಗ ದೇವಿರಮ್ಮನ ದೇವಸ್ಥಾನದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ.

ಚಿಕ್ಕಮಗಳೂರಿನ ಮಲ್ಲೇನಹಳ್ಳಿಯಲ್ಲಿರುವ ದೇವಸ್ಥಾನ ಇದಾಗಿದ್ದು, ಬಿಂಡಿಗ ದೇವೀರಮ್ಮ ದೇವಾಲಯಕ್ಕೆ ಬರುವ ಭಕ್ತರು ಸಾಂಪ್ರದಾಯಿಕ ಉಡುಗೆ ಮಾತ್ರ ಧರಿಸಿ ಬರಬೇಕು ಎಂದು ದೇವಾಲಯದ ಆಡಳಿತ ಮಂಡಳಿ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಂಪ್ರದಾಯಿಕ ಉಡುಗೆ ಧರಿಸದೇ ದೇವಾಲಯಕ್ಕೆ ಬರುವವರಿಗೆ ದೇವಾಲಯದ ಒಳಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ತಿಳಿಸಿದೆ.

ಚಂದ್ರದ್ರೋಣ ಪರ್ವತ ಶ್ರೇಣಿಗೆ ಹೊಂದಿಕೊಂಡಿರುವ 3 ಸಾವಿರ ಅಡಿ ಎತ್ತರದ ಬೆಟ್ಟದಲ್ಲಿ ಬಿಂಡಿಗ ದೇವಿರಮ್ಮ ದೇವಾಲಯವಿದ್ದು, ದೀಪಾವಳಿ ದಿನ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಪ್ಯಾಂಟ್, ಟೀ ಶರ್ಟ್, ಜೀನ್ಸ್ ಧರಿಸಿ ಬರುವುದರಿಂದ ದೇವಸ್ಥಾನದಲ್ಲಿ ಭಕ್ತಿಯ ವಾತಾವರಣಕ್ಕೆ ಧಕ್ಕೆಯಾಗುತ್ತಿದೆ. ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಕೆಲ ಹಿಂದೂಪರ ಸಂಘಟನೆಗಳು ಈ ಹಿಂದಿನಿಂದಲು ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ಇದೀಗ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular