ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಬಳಿ ‘ಡ್ರಿಂಕ್ ಆಂಡ್ ಡ್ರೈವ್’ ತಪಾಸಣೆ : ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು : ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಬಳಿ ಇನ್ಮುಂದೆ ಡ್ರಿಂಕ್ ಆಂಡ್ ಡ್ರೈವ್ ತಪಾಸಣೆ ಮಾಡಲಾಗುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ( Alok Kumar)   ಹೇಳಿದ್ದಾರೆ.

ಹೈವೇಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಹೆದ್ದಾರಿಯಲ್ಲಿ ತಪಾಸಣೆ ನಡೆಸಿದರು. ಇನ್ನುಮುಂದೆ ಟೋಲ್ ಗಳಲ್ಲಿ ಡ್ರಿಂಕ್ ಅಂಡ್ ಡ್ರೈವ್ ( Drink and Drive ) ತಪಾಸಣೆ ನಡೆಸಲಾಗುತ್ತದೆ ಎಂದರು.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಅಪಘಾತ ಹೆಚ್ಚುತ್ತಿರುವ ಹಿನ್ನೆಲೆ ಅಪಘಾತ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಹೆದ್ದಾರಿಗಳಲ್ಲಿ ಪರಿಶೀಲನೆ ನಡೆಸಿ ಅಪಘಾತ ಸಂಖ್ಯೆ ಹೆಚ್ಚಳದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.ಅವೈಜ್ಞಾನಿಕ ರಸ್ತೆ ನಿರ್ಮಾಣದ ಬಗ್ಗೆ ಹೆದ್ದಾರಿ ಅಧಿಕಾರಿಗಳಿಂದ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಹೆದ್ದಾರಿಯಲ್ಲಿ ಕೆಲವೆಡೆ ಇಂಜಿನಿಯರಿಂಗ್ ಲೋಪದೋಷಗಳ ಸರಿಪಡಿಸುವ ಕುರಿತು ಚರ್ಚೆ ನಡೆಸಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ಪ್ರಾರಂಭವಾದ ದಿನದಿಂದ 568 ಅಪಘಾತಗಳು ಸಂಭವಿಸಿದ್ದು, 158ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read