HomeHealthಕರುಳಿನ ಆರೋಗ್ಯಕ್ಕೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಈ ಪಾನೀಯ

ಕರುಳಿನ ಆರೋಗ್ಯಕ್ಕೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಈ ಪಾನೀಯ

ಕರುಳು ದುರ್ಬಲವಾಗಿದ್ದರೆ ನಿಮ್ಮ ಆರೋಗ್ಯ ಕೆಡುತ್ತದೆ. ಕರುಳು ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿ ರಕ್ತಕ್ಕೆ ಸೇರಿಸುತ್ತದೆ. ಹಾಗಾಗಿ ಕರುಳಿನ ಆರೋಗ್ಯ  ಉತ್ತಮವಾಗಿರಬೇಕು. ಅದಕ್ಕಾಗಿ ನೀವು ಬೆಳಿಗ್ಗೆ ಈ ಪಾನೀಯಗಳನ್ನು ಸೇವಿಸಿ.

*ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಗೋಧಿ ಹುಲ್ಲಿನ ರಸವನ್ನು ಸೇವಿಸಿ. ಇದು ಕರುಳಿನ ಬಲವನ್ನು ಹೆಚ್ಚಿಸಿ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಜೀರ್ಣಕಾರಿ ಸಮಸ್ಯೆಯನ್ನು ನಿವಾರಿಸುತ್ತದೆ. ಹಾಗೇ ಇದು ಹೊಟ್ಟೆ ಊದಿಕೊಳ್ಳುವುದು, ಅನಿಲ ಸಮಸ್ಯೆ, ಮಲಬದ್ಧತೆ ಸಮಸ್ಯೆಯನ್ನು ದೂರ ಮಾಡುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಜೀರ್ಣಕಾರಿ ಸಮಸ್ಯೆ ಶಮನಗೊಳ್ಳುತ್ತದೆ. ಕರುಳಿನ ಸಮಸ್ಯೆಗಳನ್ನು ನಿವಾರಿಸುತ್ತದೆ. ದಿನದ ಆರಂಭದಲ್ಲಿ ಇದನ್ನು ಸೇವಿಸಿದರೆ ಕರುಳು ಆರೋಗ್ಯಕರವಾಗಿರುತ್ತದೆ.

*ಬೆಳಿಗ್ಗೆ ಖಾಲಿ ಹೊಟ್ಟೆಯ ಬಿಸಿ ನೀರನ್ನು ಕುಡಿಯುವುದರಿಂದ ಕರುಳಿನಲ್ಲಿರುವ ರಕ್ತನಾಳಗಳು ಹಿಗ್ಗುತ್ತದೆ. ಜೀರ್ಣಕ್ರಿಯೆಗೆ ಸಹಾಯಕವಾಗಿದೆ. ಬಿಸಿನೀರು ಕುಡಿಯುವುದರಿಂದ ಪಿತ್ತಜನಕಾಂಗ ಮತ್ತು ಮೂತ್ರಪಿಂಡದ ಕಾರ್ಯ ಹೆಚ್ಚಿಸಲು ಸಹಾಯ ಮಾಡುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular