HomeKarnatakaಕಲುಷಿತ ನೀರು ಕುಡಿದು ಮಹಿಳೆ ಸಾವು

ಕಲುಷಿತ ನೀರು ಕುಡಿದು ಮಹಿಳೆ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ಕಲುಷಿತ ನೀರು ಸೇರಿಸಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ.

ಹುಣಸಘಟ್ಟ ಗ್ರಾಮದ ಚಂದ್ರಮ್ಮ ಹುರಳಹಳ್ಳಿ(69) ಮೃತಪಟ್ಟವರು. ಆಗಸ್ಟ್ 21ರಂದು ಕಲುಷಿತ ನೀರು ಸೇವನೆಯಿಂದ ಗ್ರಾಮದ 7 ಜನ ಅಸ್ವಸ್ಥರಾಗಿದ್ದು, ವಾಂತಿ ಭೇದಿಯಿಂದ ತೀವ್ರವಾಗಿ ಬಳಲಿದ್ದ ಚಂದ್ರಮ್ಮ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಚಂದ್ರಮ್ಮ ಮೃತಪಟ್ಟಿದ್ದಾರೆ.

ಕಲುಷಿತ ನೀರು ಸೇವನೆಯಿಂದ ಅವರ ಆರೋಗ್ಯದಲ್ಲಿ ಸಮಸ್ಯೆ ಹೆಚ್ಚಾಗಿ ಮೃತಪಟ್ಟಿದ್ದಾರೆ. ಅವರ ಸಾವಿಗೆ ಕಲುಷಿತ ನೀರೇ ಕಾರಣ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ವಾಂತಿ, ಭೇದಿ, ಜ್ವರದಿಂದ ಬಳಲುತ್ತಿದ್ದ ಚಂದ್ರಮ್ಮ ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ. ಕಲುಷಿತ ನೀರು ಕಾರಣವೆಂಬುದು ಇನ್ನು ದೃಢಪಟ್ಟಿಲ್ಲ. ಉಳಿದ ಆರು ಜನರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಹೊನ್ನಾಳಿ ತಾಲೂಕು ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ. ಗ್ರಾಮಕ್ಕೆ ಪೂರೈಕೆ ಮಾಡಿದ ನೀರಿನ ಮಾದರಿ ಸಂಗ್ರಹಿಸಿ ಚನ್ನಗಿರಿ ಮತ್ತು ಶಿವಮೊಗ್ಗ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular