HomeKarnatakaರಾಜ್ಯದಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಮಹತ್ವದ ಕ್ರಮ: 7,000 ಖಾಸಗಿ ಬೋರ್ವೆಲ್ ಗುತ್ತಿಗೆ ಪಡೆದು ನೀರು...

ರಾಜ್ಯದಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಮಹತ್ವದ ಕ್ರಮ: 7,000 ಖಾಸಗಿ ಬೋರ್ವೆಲ್ ಗುತ್ತಿಗೆ ಪಡೆದು ನೀರು ಪೂರೈಕೆ

ಬೆಂಗಳೂರು: ರಾಜ್ಯದ ಗ್ರಾಮೀಣ, ನಗರ ಪ್ರದೇಶದಲ್ಲಿ ನೀರಿನ ಸಮಸ್ಯೆ ನಿವಾರಣೆಗೆ ಟ್ಯಾಂಕರ್ ಮತ್ತು ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಸಮಸ್ಯೆ ಹೆಚ್ಚಾಗಲಿದ್ದು, ನೀರು ಪೂರೈಕೆಗಾಗಿ 7 ಸಾವಿರಕ್ಕೂ ಅಧಿಕ ಖಾಸಗಿ ಬೋರ್ವೆಲ್ ಗಳನ್ನು ಗುತ್ತಿಗೆ ಪಡೆಯಲು ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಸರ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬರಗಾಲದ ಪರಿಸ್ಥಿತಿಯಿಂದ ಮಾರ್ಚ್ ನಿಂದ ಮೇ ವರೆಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಲಿದೆ. ಈಗಾಗಲೇ ಟ್ಯಾಂಕರ್ ಮತ್ತು ಬೋರ್ವೆಲ್ ಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಖಾಸಗಿ ಬೋರ್ವೆಲ್ ಗಳು ಇಲ್ಲದ ಕಡೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಅಂದಾಜಿದ್ದು, 7 ಸಾವಿರ ಖಾಸಗಿ ಬೋರ್ ವೆಲ್ ಗುರುತಿಸಿ ಅವುಗಳ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular