ವಿದ್ಯಾರ್ಥಿನಿಯರಿಗೆ ಮದ್ಯ ಕುಡಿಸಿ ಡ್ಯಾನ್ಸ್: ಮೂವರು ಉಪನ್ಯಾಸಕರು ಸಸ್ಪೆಂಡ್

ರಾಮನಗರ: ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮದ್ಯಪಾನ ಮಾಡಿಸಿ ಡ್ಯಾನ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಮೂವರು ಉಪನ್ಯಾಸಕರನ್ನು ಅಮಾನತು ಮಾಡಿದೆ.

ಕನಕಪುರ ನಗರದ ರೂರಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಉಪನ್ಯಾಸಕರು ಮದ್ಯಪಾನ ಮಾಡಿಸಿ ನೃತ್ಯ ಮಾಡಿದ್ದರು. ಅನುಚಿತವಾಗಿ ವರ್ತಿಸಿದ್ದರು. ಈ ಬಗ್ಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕ್ರಮಕ್ಕೆ ಸೂಚನೆ ನೀಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಉಪನ್ಯಾಸಕರಾದ ವಿಶ್ವನಾಥ್, ಲಕ್ಷ್ಮೀಶ ಮತ್ತು ನಾಗೇಶ್ ಅವರನ್ನು ಅಮಾನತು ಮಾಡಲಾಗಿದೆ. ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜೊತೆ ಉಪನ್ಯಾಸಕರು ಅನುಚಿತವಾಗಿ ನಡೆದುಕೊಂಡಿರುವುದು ತಪ್ಪಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಹೆಚ್‍.ಕೆ. ಶ್ರೀಕಂಠ ತಿಳಿಸಿದ್ದಾರೆ.

ಸಂಸ್ಥೆಗೆ ಕೆಟ್ಟ ಹೆಸರು ತರಲು ಹಲವು ಸಿಬ್ಬಂದಿ ಪಿತೂರಿ ಮಾಡುತ್ತಿದ್ದು, ಇಂಥವರ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read