HomeLatest Newsಗಾಯಾಳು ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ದಾರಿ ಬಿಡದೆ ಅಡ್ಡಿ: ಸವಾರ ವಶಕ್ಕೆ, ಸ್ಕೂಟರ್ ಜಪ್ತಿ

ಗಾಯಾಳು ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ದಾರಿ ಬಿಡದೆ ಅಡ್ಡಿ: ಸವಾರ ವಶಕ್ಕೆ, ಸ್ಕೂಟರ್ ಜಪ್ತಿ

ಮಂಗಳೂರು: ಗಾಯಾಳು ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ದಾರಿ ಬಿಡದೆ ಪುಂಡಾಟಿಕೆ ಮೆರೆದಿದ್ದ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ನಿವಾಸಿ ಮೊಹಮದ್ ಮನ್ಸೂರ್(38) ವಶಕ್ಕೆ ಪಡೆಯಲಾಗಿದೆ.

ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಸಮೀಪ ಗುರುವಾರ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ದ್ವಿಚಕ್ರ ವಾಹನ ಸವಾರ ಮನ್ಸೂರ್ ಅಡ್ಡಿಪಡಿಸಿದ್ದ. ಸುಮಾರು 3-4 ಕಿ.ಮೀ. ದೂರದವರೆಗೆ ಆಂಬುಲೆನ್ಸ್ ಗೆ ದಾರಿ ಬಿಡದೆ ಮುಂದೆ ಸಾಗಿ ಅಡ್ಡಿಪಡಿಸಿದ್ದ.

ಗುರುವಾರ ಬಿಸಿಲೆ ಘಾಟ್ ನಲ್ಲಿ ಅಪಘಾತ ಸಂಭವಿಸಿದ್ದು, ಗಾಯಾಳುಗೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಆಂಬುಲೆನ್ಸ್ ನ ಸೈರನ್ ಶಬ್ದ ಕೇಳಿದರೂ ದಾರಿ ಬಿಟ್ಟು ಕೊಡದೆ ಆಂಬುಲೆನ್ಸ್ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ್ದಾನೆ. ಈ ಹುಚ್ಛಾಟದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಆರೋಪಿ ಸ್ಕೂಟರ್ ಸವಾರನನ್ನು ವಶಕ್ಕೆ ಪಡೆದು ಸ್ಕೂಟರ್ ಜಪ್ತಿ ಮಾಡಲಾಗಿದೆ. ಬಂಟ್ವಾಳ ಠಾಣೆಯಲ್ಲಿ ಮನ್ಸೂರ್ ವಿರುದ್ಧ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular