ಚಿಕ್ಕಬಳ್ಳಾಪುರ : ಜಿಲ್ಲಾಪಂಚಾಯತ್ ಚಾಲಕ ಬಾಬು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ರದ್ದು (FIR) ಕೋರಿ ಸಂಸದ ಡಾ.ಕೆ ಸುಧಾಕರ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಸುಧಾಕರ್ ಅವರ ವಕೀಲರು ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆಗೆ ಅವರು ಮನವಿ ಮಾಡಿದ್ದಾರೆ.ಸಂಸದ ಸುಧಾಕರ್ ಹಾಗೂ ಬೆಂಬಲಿಗರ ಹೆಸರು ಬರೆದಿಟ್ಟು ಬಾಬು ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದರು. ಬಾಬು ಪತ್ನಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಸದ ಡಾ.ಕೆ ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅಟ್ರಾಸಿಟಿ ಕೇಸ್ ಕೂಡ ದಾಖಲಿಸಲಾಗಿದೆ. ಸಂಸದ ಸುಧಾಕರ್ ಎ1 ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಎಫ್ಐಆರ್ ನಲ್ಲಿ ನಾಗೇಶ್ ಹಾಗೂ ಮಂಜುನಾಥ್ ಹೆಸರನ್ನು ಉಲ್ಲೇಖಿಸಲಾಗಿದೆ.
You Might Also Like
TAGGED:ಆತ್ಮಹತ್ಯೆ