HomeKarnatakaಬೆಂಗಳೂರಿನ ಇಸ್ರೋ ಕ್ಯಾಂಪಸ್ ಮೇಲೆ ಡ್ರೋನ್ ಹಾರಾಟ: ಎಫ್ಐಆರ್ ದಾಖಲು

ಬೆಂಗಳೂರಿನ ಇಸ್ರೋ ಕ್ಯಾಂಪಸ್ ಮೇಲೆ ಡ್ರೋನ್ ಹಾರಾಟ: ಎಫ್ಐಆರ್ ದಾಖಲು

ಬೆಂಗಳೂರಿನ ಇಸ್ರೋ ಕ್ಯಾಂಪಸ್ ಮೇಲೆ ಡ್ರೋನ್ ಹಾರಾಟ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಸಿಐಎಸ್ಎಫ್ ಸಬ್ ಇನ್ಸ್ಪೆಕ್ಟರ್ ಈ ಕುರಿತಾಗಿ ದೂರು ನೀಡಿದ್ದು, ಇದರ ಅನ್ವಯ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ, ಅಪರಾಧಿಕ ಅತಿಕ್ರಮಣ ಏರ್ ಕ್ರಾಫ್ಟ್ ಕಾಯ್ದೆ ಅಧಿಕೃತ ಸುರಕ್ಷತಾ ನಿರ್ದೇಶನಗಳ ಉಲ್ಲಂಘನೆ ಆರೋಪದಡಿ ಹೆಚ್ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೇ 2 ರಂದು ಬೆಳಿಗ್ಗೆ 8:16ರ ಸುಮಾರಿಗೆ ಕಾರ್ತಿಕ್ ನಗರದ ಇಸ್ರೋ ಉಪಗ್ರಹ ಏಕೀಕರಣ ಮತ್ತು ಪರೀಕ್ಷಾ ಕೇಂದ್ರದ ಮೇಲೆ 80 ರಿಂದ 100 ಅಡಿಗಳ ಎತ್ತರದಲ್ಲಿ ಅಪರಿಚಿತರು ಡ್ರೋನ್ ಹಾರಿಸಿದ್ದಾರೆ. ಸೂಕ್ಷ್ಮ ಪ್ರದೇಶವಾಗಿರುವ ಇಸ್ರೋ ಡ್ರೋನ್ ರಹಿತ ವಲಯವಾಗಿದೆ. ಈ ಪ್ರದೇಶದಲ್ಲಿ ಅನುಮತಿ ಇಲ್ಲದೆ ಇಂತಹ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಹೀಗಾಗಿ ಡ್ರೋನ್ ಹಾರಿಸಿದ ಅಪರಿಚಿತರ ವಿರುದ್ಧ ಕಾನೂನು ಕ್ರಮಕ್ಕೆ ಕೋರಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular