HomeKarnatakaರಾಜ್ಯದ ಶಕ್ತಿಸೌಧ ವಿಧಾನಸೌಧದ ಮೇಲೆ ಡ್ರೋನ್ ಹಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್

ರಾಜ್ಯದ ಶಕ್ತಿಸೌಧ ವಿಧಾನಸೌಧದ ಮೇಲೆ ಡ್ರೋನ್ ಹಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್

ಬೆಂಗಳೂರು: ಅನುಮತಿ ಇಲ್ಲದೆ ವಿಧಾನಸೌಧ ಕಟ್ಟಡದ ಮೇಲೆ ಡ್ರೋನ್ ಕ್ಯಾಮೆರಾ ಹಾರಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೋಲೀಸರು ಬಂಧಿಸಿದ್ದಾರೆ.

ತುಮಕೂರು ಜಿಲ್ಲೆ ಉಪ್ಪಾರಹಳ್ಳಿ ನಿವಾಸಿ ವಿನಯ್(33) ಬಂಧಿತ ಆರೋಪಿಯಾಗಿದ್ದಾನೆ. ಡ್ರೋನ್ ಮತ್ತು ರಿಮೋಟ್ ಜಪ್ತಿ ಮಾಡಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೆಬಲ್ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ಶಿವಕುಮಾರ್ ಶುಕ್ರವಾರ ಬೆಳಗ್ಗೆ 7.30ಕ್ಕೆ  ಗಸ್ತುಕರ್ತವ್ಯದಲ್ಲಿದ್ದಾಗ ವಿಧಾನಸೌಧದ ಮೇಲೆ ಡ್ರೋನ್ ಹಾರಾಟ ನಡೆಸುತ್ತಿರುವುದು ಕಂಡು ಬಂದಿದೆ. ಸುತ್ತ ಪರಿಶೀಲಿಸಿದಾದ ಹೈಕೋರ್ಟ್ ಕಡೆ ಇರುವ ಮೆಟ್ರೋ ನಿಲ್ದಾಣ ಪಕ್ಕದಲ್ಲಿ ಅಪರಿಚಿತ ವ್ಯಕ್ತಿ ರಿಮೋಟ್ ಕೈಯಲ್ಲಿ ಹಿಡಿದುಕೊಂಡು ಡ್ರೋನ್ ಹಾರಾಟ ನಟಿಸುತ್ತಿರುವುದು ಕಂಡು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆತನನ್ನು ವಶಕ್ಕೆ ಪಡೆದು ಡ್ರೋನ್ ಮತ್ತು ರಿಮೋಟ್ ಜಪ್ತಿ ಮಾಡಲಾಗಿದೆ. ನಂತರ ಹೊಯ್ಸಳ ಗಸ್ತು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಸುಭಾಷ್ ಚಂದ್ರ ವಶಕ್ಕೆ ಆತನನ್ನ ಒಪ್ಪಿಸಲಾಗಿದೆ. ಪ್ರೀ ವೆಡ್ಡಿಂಗ್ ಶೂಟ್ ಗಾಗಿ ತುಮಕೂರಿನಿಂದ ಬೆಂಗಳೂರಿಗೆ ಬಂದು ವಿಧಾನಸೌಧ ಕಟ್ಟಡದ ವಿಡಿಯೋ ಸೆರೆ ಹಿಡಿಯುತ್ತಿರುವುದಾಗಿ ಆತ ಹೇಳಿಕೆ ನೀಡಿದ್ದಾನೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular