HomeKarnatakaBIG NEWS : ಇನ್ನೂ 40-50 ತಾಲೂಕುಗಳು ಶೀಘ್ರವೇ ಬರಪೀಡಿತ ವ್ಯಾಪ್ತಿಗೆ ; ಡಿಸಿಎಂ ಡಾ.ಜಿ...

BIG NEWS : ಇನ್ನೂ 40-50 ತಾಲೂಕುಗಳು ಶೀಘ್ರವೇ ಬರಪೀಡಿತ ವ್ಯಾಪ್ತಿಗೆ ; ಡಿಸಿಎಂ ಡಾ.ಜಿ ಪರಮೇಶ್ವರ್ ಘೋಷಣೆ

ಬೆಂಗಳೂರು :  ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಇದೀಗ ಇನ್ನೂ 40ರಿಂದ 50 ತಾಲೂಕುಗಳನ್ನು ಬರಪೀಡಿತ ವ್ಯಾಪ್ತಿಗೆ ಸೇರ್ಪಡೆ ಮಾಡುವ ಸಾಧ್ಯತೆ ಇದೆ.

ಈ ಕುರಿತು ಬರ ಅಧ್ಯಯನ ನಡೆಸಲಾಗುತ್ತಿದ್ದು, ವರದಿ ಆಧರಿಸಿ ಶೀಘ್ರದಲ್ಲೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಬರ ಅಧ್ಯಯನ ಪ್ರಕ್ರಿಯೆ ಮುಂದುವರಿದಿದೆ. ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಇದರ ಜೊತೆಗೆ ಇನ್ನೂ 30ರಿಂದ 40, ಗರಿಷ್ಠ 50 ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡುವ ಸಾಧ್ಯತೆ ಇದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬರಪೀಡಿತ ತಾಲೂಕುಗಳ ಕುರಿತು ಅಧ್ಯಯನ ನಡೆಸುವ ಪ್ರಕ್ರಿಯೆ ಮುಂದುವರಿದಿದ್ದು, ಅಧಿಕಾರಿಗಳ ವರದಿ ಆಧರಿಸಿ ಮುಂದಿನ ದಿನಗಳಲ್ಲಿ ಹೆಚ್ಚುವರಿ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಈಗಾಗಲೇ ಘೋಷಿಸಿರುವ 101 ತಾಲೂಕುಗಳ ಹೊರತಾಗಿ ಇನ್ನೂ 30ರಿಂದ 40 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಅಗತ್ಯವಿದ್ದರೆ ಈ ಸಂಖ್ಯೆ 50ರವರೆಗೂ ಏರಿಕೆಯಾಗಬಹುದು ಎಂದು ಡಿಸಿಎಂ ಮಾಹಿತಿ ನೀಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular