HomeAgricultureರೈತರಿಗೆ ಗುಡ್ ನ್ಯೂಸ್: ಕೃಷಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ ಸರ್ಕಾರ ಆದೇಶ

ರೈತರಿಗೆ ಗುಡ್ ನ್ಯೂಸ್: ಕೃಷಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಪಡೆದ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇದರಿಂದ 56,879 ರೈತರ 440.30 ಕೋಟಿ ರೂ. ಬಡ್ಡಿ ಮನ್ನಾ ಆಗಲಿದೆ. 2024ರ ಫೆಬ್ರವರಿ 20ರೊಳಗೆ ಸಂಬಂಧಿಸಿದ ಸಹಕಾರ ಸಂಘ, ಬ್ಯಾಂಕುಗಳಿಗೆ ಸಂಪೂರ್ಣ ಸಾಲ ಬಾಕಿ ಪಾವತಿಸಿದಲ್ಲಿ ಮಾತ್ರ ಬಡ್ಡಿ ಮನ್ನಾ ಪ್ರಯೋಜನ ಸಿಗಲಿದೆ ಎಂದು ಸಹಕಾರ ಇಲಾಖೆ ತಿಳಿಸಿದೆ.

ಬಡ್ಡಿ ಮನ್ನಾ ಬೆಳೆ ಸಾಲಕ್ಕೆ ಅನ್ವಯವಾಗುವುದಿಲ್ಲ. ಬೆಳೆ ಸಾಲ ಅಲ್ಪಾವಧಿ ಸಾಲವಾಗಿದ್ದು, ಶೂನ್ಯ ಬಡ್ಡಿ ದರದಲ್ಲಿ ನೀಡಲಾಗುತ್ತದೆ. ಹೀಗಾಗಿ ಅದಕ್ಕೆ ಬಡ್ಡಿ ಮನ್ನಾ ಅನ್ವಯವಾಗುವುದಿಲ್ಲ. ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಹಾಗೂ ಕೃಷಿ ಸಂಬಂಧಿತ ಸುಸ್ತಿ ಸಾಲಗಳಿಗೆ ಮಾತ್ರ ಬಡ್ಡಿ ಮನ್ನಾ ಅನ್ವಯವಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular