BIG NEWS: ರಾಜ್ಯ ಸರ್ಕಾರದಿಂದ ಬರ ಪರಿಹಾರ ಕೆಲಸ ಆರಂಭ; ಆದರೆ ಕೇಂದ್ರದಿಂದ ಇಂದಿನವರೆಗೆ ಯಾವುದಕ್ಕೂ ಉತ್ತರವಿಲ್ಲ; ಸಿಎಂ ಸಿದ್ದರಾಮಯ್ಯ ಕಿಡಿ


ವಿಜಯಪುರ: ಬರ ಪರಿಹಾರ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕೆಲಸ ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗುತ್ತಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡುವ ನಿಟ್ಟಿನಲ್ಲಿಯೂ ಕೆಲಸಗಳು ನಡೆಯುತ್ತಿವೆ ಎಂದರು.

ಬರಗಾಲ ಬಂದಾಗ 150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಕೇಂದ್ರ ಸರ್ಕಾರಕ್ಕೆ ಅನುಮತಿ ಕೋರಿ ಈಗಾಗಲೇ ಪತ್ರ ಬೆರೆಯಲಾಗಿದೆ. ಆದರೆ ಇಂದಿನವರೆಗೂ ಉತ್ತರ ಬಂದಿಲ್ಲ.

ಇನ್ನು ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡ ಬಂದು ಹೋಗಿ ಒಂದು ತಿಂಗಳು ಕಳೆದಿದೆ. ಆದರೂ ಇಂದಿನವರೆಗೆ ಒಂದು ನಯಾಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಪತ್ರ ಬರೆಯಲಾಗಿತ್ತು. ಅದಕ್ಕೂ ಕೆಂದ್ರದಿಂದ ಉತ್ತರವಿಲ್ಲ ಎಂದು ಕಿಡಿಕಾರಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read