ಸಾಲ ವಸೂಲಾತಿ ನ್ಯಾಯಮಂಡಳಿಗೆ ಪಾಸ್ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರವಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸಾಲ ವಸೂಲಾತಿ ನ್ಯಾಯ ಮಂಡಳಿ(ಡಿಆರ್‌ಟಿ)ಗೆ ಪಾಸ್ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರವಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.

ಪಾಸ್ಪೋರ್ಟ್ ವಶಕ್ಕೆ ಪಡೆದಿದ್ದ ಡಿ.ಆರ್.ಟಿ. ಕ್ರಮ ಪ್ರಶ್ನೆಸಿ ಮುಂಬೈ ಮೂಲದ ಶಂಭುಕುಮಾರ್ ಕಸ್ಲೆವಾಲ್ ಎಂಬುವರು ಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. 2016ರಲ್ಲಿ ಡಿಆರ್‌ಟಿ ವಶಕ್ಕೆ ಪಡೆದ ಅರ್ಜಿದಾರರ ಪಾಸ್ಪೋರ್ಟ್ ಹಿಂತಿರುಗಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ಸಾಲ ವಸೂಲಾತಿ ನ್ಯಾಯಮಂಡಳಿ ಸಿವಿಲ್ ನ್ಯಾಯಾಲಯದಂತೆ ಕಾರ್ಯನಿರ್ವಹಿಸಲಿದ್ದು, ಈ ನ್ಯಾಯಾಲಯಕ್ಕೆ ಪಾಸ್ಪೋರ್ಟ್ ತನ್ನ ವಶದಲ್ಲಿಟ್ಟುಕೊಳ್ಳುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಪಾಸ್ಪೋರ್ಟ್ ಕಾಯ್ದೆಯ ಸೆಕ್ಷನ್ 10ರ ಅಡಿ ಪಾಸ್ ಪೋರ್ಟ್ ವಶಪಡಿಸಿಕೊಳ್ಳುವುದಕ್ಕೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮಾತ್ರ ಸ್ವಾತಂತ್ರ್ಯವಿದೆ ಎಂದು ಹೈಕೋರ್ಟ್ ತಿಳಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read