HomeLatest NewsBIG NEWS: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ: ಆರೋಪಿ ಅರೆಸ್ಟ್

BIG NEWS: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ: ಆರೋಪಿ ಅರೆಸ್ಟ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರೇಮ್ ಅಲಿಯಾಸ್ ವೈಷ್ಣವ್ ಬಂಧಿತ ಆರೋಪಿ. ಆರೋಪಿಯಿಂದ 6,700 ತ್ಯಾಪೆನ್ಡನಾಲ್ ಮಾತ್ರೆಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಒಂದು ಮಾತ್ರೆಯನ್ನು 200-500 ರೂಪಾಯಿಗಳಿಗೆ ಕಾಲೇಜು ವಿದ್ಯಾರ್ಥಿಗಳಿಗೆ ಮಾರುತ್ತಿದ್ದ. ಈ ಮಾತ್ರೆ ಮತ್ತು ಬರಿಸುತ್ತದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೇರೆ ರಾಜ್ಯಗಳಿಂದ ಆರೋಪಿ ಈ ಮಾತ್ರೆಗಳನ್ನು ತರಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular