ಆಂಧ್ರಪ್ರದೇಶದಿಂದ ತಂದು ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಇಬ್ಬರು ಅರೆಸ್ಟ್

ಶಿವಮೊಗ್ಗ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಇಬ್ಬರನ್ನು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪ ಆಗರಹಳ್ಳಿ ಕ್ಯಾಂಪ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಆಗರದಹಳ್ಳಿ ಕ್ಯಾಂಪ್ ನ ಸಂಜೀವರಾಜ್(40), ಸಿದ್ದರ ಕಾಲೋನಿಯ ಗುರುಪ್ರಸಾದ್(24) ಬಂಧಿತರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಆಗರದಹಳ್ಳಿ ಕ್ಯಾಂಪ್ ನ ಮನೆ ಮೇಲೆ ದಾಳಿ ನಡೆಸಿದ್ದು 6.5 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ತರಲಾಗಿದ್ದು ಅದನ್ನು ಉಡುಪಿಯ ಸೂರಜ್ ಕುಮಾರ್ ಎಂಬುವರಿಗೆ ಸರಬರಾಜು ಮಾಡಲಾಗುತ್ತಿತ್ತು ಎಂಬುದು ತನಿಖೆಯಲ್ಲಿ ಗೊತ್ತಾಗಿದೆ. ಪೊಲೀಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read