HomeLatest NewsBREAKING : ಬೆಂಗಳೂರಲ್ಲಿ 'ಡ್ರಗ್ ಪೆಡ್ಲಿಂಗ್' ನಡೆಸುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್ :  1.2 ಕೋಟಿ...

BREAKING : ಬೆಂಗಳೂರಲ್ಲಿ ‘ಡ್ರಗ್ ಪೆಡ್ಲಿಂಗ್’ ನಡೆಸುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್ :  1.2 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ಡ್ರಗ್ಸ್ ಪೆಡ್ಲಿಂಗ್ ನಲಿ ಕಳೆದ 10 ವರ್ಷಗಳಿಂದ ಸಕ್ರಿಯನಾಗಿದ್ದ ವಿದೇಶಿ ಪ್ರಜೆಯನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.

ನೈಜೀರಿಯಾ ಮೂಲದ ಚಿಕ್ವುಮಾ ಬಂಧಿತ ಆರೋಪಿ. ಆವಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ಆರೋಪಿ ಮನೆ ಮೇಲೆ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬರೋಬ್ಬರಿ 1.2 ಕೋಟಿ ರೂಪಾಯಿ ಮೌಲ್ಯದ 600 ಗ್ರಾಂ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ.

ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿಸಿ, ಕಾಲೇಜು ವಿದ್ಯಾರ್ಥಿಗಳಿಗೆ, ಪಾರ್ಟಿ ಗಳಿಗೆ ಅವುಗಳನ್ನು ಮಾರುತ್ತಿದ್ದ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular