ಬರೋಬ್ಬರಿ 11 ಕೋಟಿ ಮೌಲ್ಯದ ಮಾದಕ ವಸ್ತು ಸಾಗಾಟ: ಗೋವಾ ಪೊಲೀಸರಿಂದ ಬೆಂಗಳೂರು ಮೂಲದ ಯುವಕ ಅರೆಸ್ಟ್

ಪಣಜಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಬೆಂಗ್ಳೂರು ಮೂಲದ ಯುವಕನನ್ನು ಗೋವಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

23 ವರ್ಷದ ಬೆಂಗಳೂರು ಮೂಲದ ಯುವಕ ನೇಪಾಳದಿಂದ ಮಾದಕ ವಸ್ತುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ. ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಗೋವಾ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಆತನ ಬಳಿ ಬರೋಬ್ಬರಿ 11.6 ಕೋಟಿ ಮೌಲ್ಯದ ಮಾದಕ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಇದು ಗೋವಾ ಪೊಲೀಸರು ಇತಿಹಾಸದಲ್ಲಿಯೇ ಮೊದಲ ಬಾರಿ ಒಂದೇ ದಿನದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತು ಜಪ್ತಿ ಮಾಡಿದ ಪ್ರಕರಣವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read