HomeIndiaಬರೋಬ್ಬರಿ 11 ಕೋಟಿ ಮೌಲ್ಯದ ಮಾದಕ ವಸ್ತು ಸಾಗಾಟ: ಗೋವಾ ಪೊಲೀಸರಿಂದ ಬೆಂಗಳೂರು ಮೂಲದ ಯುವಕ...

ಬರೋಬ್ಬರಿ 11 ಕೋಟಿ ಮೌಲ್ಯದ ಮಾದಕ ವಸ್ತು ಸಾಗಾಟ: ಗೋವಾ ಪೊಲೀಸರಿಂದ ಬೆಂಗಳೂರು ಮೂಲದ ಯುವಕ ಅರೆಸ್ಟ್

ಪಣಜಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಬೆಂಗ್ಳೂರು ಮೂಲದ ಯುವಕನನ್ನು ಗೋವಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

23 ವರ್ಷದ ಬೆಂಗಳೂರು ಮೂಲದ ಯುವಕ ನೇಪಾಳದಿಂದ ಮಾದಕ ವಸ್ತುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ. ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಗೋವಾ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಆತನ ಬಳಿ ಬರೋಬ್ಬರಿ 11.6 ಕೋಟಿ ಮೌಲ್ಯದ ಮಾದಕ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಇದು ಗೋವಾ ಪೊಲೀಸರು ಇತಿಹಾಸದಲ್ಲಿಯೇ ಮೊದಲ ಬಾರಿ ಒಂದೇ ದಿನದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತು ಜಪ್ತಿ ಮಾಡಿದ ಪ್ರಕರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular