HomeKarnatakaBREAKING NEWS: ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕ ವಸ್ತು ಸಾಗಾಟ: ಮೂವರು ಅರೆಸ್ಟ್

BREAKING NEWS: ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕ ವಸ್ತು ಸಾಗಾಟ: ಮೂವರು ಅರೆಸ್ಟ್

ಮಂಗಳೂರು: ಕಾರಿನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಬೆಂಗಳೂರಿನಿಂದ ಮಂಗಳೂರಿಗೆ ಬಾಡಿಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು. ಎಂಡಿಎಂಎ ಸೇರಿದಂತೆ ಹಲವು ಮಾದಕ ವಸ್ತು ಹಾಗೂ ಕಾರು ಸಮೇತ ಪೊಲಿಸರು ಮೂವರನ್ನು ಬಂಧಿಸಿದ್ದಾರೆ.

ಶಾಜಹಾನ್, ಮೊಹಮ್ಮದ್ ನಿಸಾರ್, ಮನ್ಸೂರ್ ಬಂಧಿತ ಆರೋಪಿಗಳು. ಬಂಧಿತರಿಂದ 2.10 ಲಕ್ಷ ಮೌಲ್ಯದ 42 ಗ್ರಾಂ ಎಂಡಿಎಂಎ ಜಪ್ತಿ ಮಾಡಲಾಗಿದೆ. ಬಾಡಿಗೆ ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದರು. ಆರೋಪಿಗಳು ಕರ್ನಾಟಕ ಹಾಗೂ ಕೇರಳ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular