ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಬರೋಬ್ಬರಿ ೫.೧೫ ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಸಿಸಿಬಿ ಆಂಟಿ ನಾರ್ಕೋಟಿಕ್ ವುಂಗ್ ಬೃಹತ್ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 5.15 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿಯ ಬಾಡಿಗೆ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬಾಡಿಗೆ ಮನೆಯಲ್ಲಿದ್ದ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ.
ದಾಳಿ ವೇಳೆ 300 ಎಕ್ಸ್ ಟೆಸಿ ಮಾಅತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿ ಈ ಹಿಂದೆ ಕಾಡುಗೋಡಿ, ಹೆಣ್ನೂರು ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ. ಡ್ರಗ್ಸ್ ಪ್ರಕರಣದಲ್ಲಿ ಒಮ್ಮೆ ಬಂಧನವಾಗಿ ಬಿಡುಗಡೆಯಾಗಿದ್ದ. ಜೈಲಿನಿಂದ ಹೊರ ಬಂದ ಬಳಿಕ ಮತ್ತೆ ಅದೇ ಹಳೇ ಚಾಳಿ ಮುಂದುವರೆಸಿದ್ದ. ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಪೊಲೀಸರು ಬರೋಬ್ಬರಿ 5.15 ಕೋಟಿ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ತನಿಖೆ ಮುಂದುವರೆಸಲಾಗಿದೆ.

