ಬೆಂಗಳೂರು: ಬೆಂಗಳೂನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನು ಬೆಂಗಳೂರು ನಗರ ಜಿಲ್ಲೆ ಆನೇಕಲ್ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಬ್ಲೆಸಿಂಗ್ ಒಪುಟಾ (34) ಬಂಧಿತ ಮಹಿಳೆ. ಬಂಧಿತಳಿಂದ 18 ಲಕ್ಷ ಮೌಲ್ಯದ 180 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಆನೇಕಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ಬಂಧಿಸಿದ್ದಾರೆ.
ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಅಲೈನ್ಸ್ ಕಾಲೇಜು ಬಳಿ ಈಕೆ ಕೊಕೇನ್ ಮಾರಾಟ ಮಾಡುತ್ತಿದ್ದಳು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ವಿದೇಶಿ ಮಹಿಳೆಯನ್ನು ಬಂಧಿಸಿದ್ದಾರೆ. ಈಕೆಯ ಜೊತೆಗೆ ಇನ್ನಷ್ಟು ಜಾಲಗಳಿರುವ ಬಗ್ಗೆ ಶಂಕೆ ಇದ್ದು, ಆ ನಿಟ್ಟಿನಲ್ಲಿಯೂ ತನಿಖೆ ನಡೆಸಲಾಗುತ್ತಿದೆ.

