HomeIndiaಅಸ್ಸಾಂನಲ್ಲಿ ಬರೋಬ್ಬರಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಅಸ್ಸಾಂನಲ್ಲಿ ಬರೋಬ್ಬರಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಗುವಾಹಟಿ: ಅಸ್ಸಾಂನಲ್ಲಿ 23 ಕೋಟಿ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸುಳಿವಿನ ಮೇರೆಗೆ ರಾಜ್ಯ ಪೊಲೀಸರು ಮತ್ತು ಸಿಆರ್‌ಪಿಎಫ್‌ನ ಜಂಟಿ ಕಾರ್ಯಾಚರಣೆ ತಂಡ ಬಸ್‌ನಲ್ಲಿ ನಾಗಾಲ್ಯಾಂಡ್‌ಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯಿಂದ 5 ಕೆಜಿ ಬ್ರೌನ್ ಶುಗರ್ ವಶಪಡಿಸಿಕೊಂಡಿದೆ ಎಂದು ಕರ್ಬಿ ಆಂಗ್ಲಾಂಗ್‌ನ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಸೈಕಿಯಾ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೋಕಜಾನ್ ಪ್ರದೇಶದಲ್ಲಿ ಬಸ್ ಅನ್ನು ತಡೆಹಿಡಿಯಲಾಗಿದ್ದು, ಬಂಧಿತ ವ್ಯಕ್ತಿಯನ್ನು ಬಿಹಾರದ ಸಿವಾನ್ ಜಿಲ್ಲೆಯ ಸುನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ವಶಪಡಿಸಿಕೊಂಡಿರುವ ಮಾದಕ ದ್ರವ್ಯದ ಮೌಲ್ಯ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 15 ಕೋಟಿ ರೂ. ಆಗಿದೆ.

ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ ಗುವಾಹಟಿಯಲ್ಲಿ 8 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಳ್ಳಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ ಭಾನುವಾರ ರಾತ್ರಿ ಬಸಿಷ್ಠ ಪೊಲೀಸ್ ಠಾಣೆ ವ್ಯಾಪ್ತಿಯ ನಲಪಾರದಲ್ಲಿ ಎರಡು ವಾಹನಗಳನ್ನು ತಡೆದು ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.

ಈ ಎರಡು ವಾಹನಗಳಲ್ಲಿ 88 ಸೋಪ್ ಕೇಸ್ ಗಳಲ್ಲಿ ಸುಮಾರು 1.056 ಕೆ.ಜಿ ಹೆರಾಯಿನ್ ಸಾಗಿಸಲಾಗುತ್ತಿತ್ತು. ಇದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 8 ಕೋಟಿ ರೂ. ಮೌಲ್ಯದ್ದಾಗಿದೆ. ಬಂಧಿತರನ್ನು ಅಬ್ದುಲ್ ರೋಸಿದ್, ಮುಜ್ಜಮಿಲ್ ಹಕ್ ಮತ್ತು ಜಮಾಲ್ ಅಲಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular