HomeKarnatakaBREAKING : ಬೆಂಗಳೂರಲ್ಲಿ ಬರೋಬ್ಬರಿ 11.86 ಕೋಟಿ ರೂ. ಮೌಲ್ಯದ  ಡ್ರಗ್ಸ್ ಜಪ್ತಿ , 10...

BREAKING : ಬೆಂಗಳೂರಲ್ಲಿ ಬರೋಬ್ಬರಿ 11.86 ಕೋಟಿ ರೂ. ಮೌಲ್ಯದ  ಡ್ರಗ್ಸ್ ಜಪ್ತಿ , 10 ಮಂದಿ ಆರೋಪಿಗಳು ಅರೆಸ್ಟ್.!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.

ನಗರದ ವಿವಿಧೆಡೆ ನಡೆದ ಈ ಮಿಂಚಿನ ದಾಳಿಯಲ್ಲಿ ಇಬ್ಬರು ವಿದೇಶಿ ಮಹಿಳೆಯರು ಹಾಗೂ ಹೊರರಾಜ್ಯದ ಐವರು ಸೇರಿದಂತೆ ಒಟ್ಟು 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಅಪಾರ ಪ್ರಮಾಣದ ಎಂಡಿಎಂಎ, ಕೊಕೇನ್ ಹಾಗೂ ಗಾಂಜಾವನ್ನು ಜಪ್ತಿ ಮಾಡಲಾಗಿದ್ದು, ಈ ಸಂಬಂಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಮಾದಕ ವಸ್ತು ಜಾಲದ ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು ನಗರದ ವಿವಿಧೆಡೆ ಮಿಂಚಿನ ಕಾರ್ಯಾಚರಣೆ ನಡೆಸಿ, ಬರೋಬ್ಬರಿ 11.86 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಿದೇಶಿ ಮಹಿಳೆಯರು ಹಾಗೂ ಹೊರರಾಜ್ಯದ ಐವರು ಸೇರಿದಂತೆ ಒಟ್ಟು 10 ಜನರನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾಖಲಾದ ಪ್ರಕರಣಗಳು: ನಗರದ ಯಲಹಂಕ, ಡಿ.ಜೆ. ಹಳ್ಳಿ, ಬಾಣಸವಾಡಿ, ಕೋರಮಂಗಲ, ಬೊಮ್ಮನಹಳ್ಳಿ ಮತ್ತು ಪುಲಕೇಶಿನಗರ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಈ ಜಾಲದ ಹಿಂದೆ ಇರುವ ಇತರ ವ್ಯಕ್ತಿಗಳ ಪತ್ತೆಗಾಗಿ ವಿಚಾರಣೆ ಮುಂದುವರೆಸಿದ್ದಾರೆ.ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಈ ಜಾಲದ ಹಿಂದೆ ಇರುವ ಇತರ ವ್ಯಕ್ತಿಗಳ ಪತ್ತೆಗಾಗಿ ವಿಚಾರಣೆ ಮುಂದುವರೆಸಿದ್ದಾರೆ.

ಜಪ್ತಿ ಮಾಡಲಾದ ವಸ್ತುಗಳು: ಪೊಲೀಸರು ಬಂಧಿತರಿಂದ ಈ ಕೆಳಗಿನ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ:

  • ಎಂಡಿಎಂಎ (MDMA): 5.9 ಕೆಜಿ
  • ಕೊಕೇನ್: 1.15 ಕೆಜಿ
  • ಗಾಂಜಾ: 21 ಕೆಜಿ
  • ಎಕ್ಸ್ಟೆಸಿ ಮಾತ್ರೆಗಳು: 19 ಗ್ರಾಂ
  • ಜೊತೆಗೆ ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular