ಬೆಂಗಳೂರು : ಬೆಂಗಳೂರಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 2.5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ . ಈ ಸಂಬಂಧ ವಿದೇಶಿ ಪ್ರಜೆ ಸೇರಿ ಇಬ್ಬರು ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.
ನೈಜೀರಿಯಾ ಮೂಲದ ಆರೋಪಿ ಹಾಗೂ ತಮಿಳುನಾಡಿನ ನವೀನ್ ರಾಜ್ ಬಂಧಿತರು ಎಂದು ಗುರುತಿಸಲಾಗಿದೆ.
ಬಂಡೆಪಾಳ್ಯದ ಮನೆಯೊಂದರಲ್ಲಿ ಡ್ರಗ್ಸ್ ಸಂಗ್ರಹಿಸಿಡಲಾಗಿತ್ತು. ನವೀನ್ ರಾಜ್ ಮನೆಯಲ್ಲಿ ಡ್ರಗ್ಸ್ ಸಂಗ್ರಹಿಸಿಟ್ಟಿದ್ದನು. ಡಾರ್ಕ್ ವೆಬ್ ಮೂಲಕ ತಂದು ಮಾರಾಟ ಮಾಡಲಾಗುತ್ತಿತ್ತು.
ವಿದೇಶಿ ಪ್ರಜೆ ಸ್ನೇಹಿತನಿಂದ ಡ್ರಗ್ಸ್ ತರಿಸಿಕೊಳ್ಳುತ್ತಿದ್ದನು. ವಿದೇಶಿ ಪ್ರಜೆ ಜೊತೆ ತಮಿಳುನಾಡಿನ ನವೀನ್ ರಾಜ್ ಡ್ರಗ್ಸ್ ಮಾರಾಟ ಮಾಡುತ್ತಿದ್ದನು. ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಡ್ರಗ್ಸ್ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಸದ್ಯ ಇಬ್ಬರು ಆರೋಪಿಗಳನ್ನ ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದಾರೆ.

