HomeKarnatakaಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆ ತಡೆಯಲು ಕಾರಾಗೃಹ ಇಲಾಖೆಯಿಂದ ಮಹತ್ವದ ಕ್ರಮ

ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆ ತಡೆಯಲು ಕಾರಾಗೃಹ ಇಲಾಖೆಯಿಂದ ಮಹತ್ವದ ಕ್ರಮ

ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆ ತಡೆಯಲು ಕಾರಾಗೃಹ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಸೂಚನೆ ಮೇರೆಗೆ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕೈದಿಗಳನ್ನು ಮಾದಕ ವಸ್ತು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಮಾರ್ಚ್ 9 ರಂದು ಸಿಬ್ಬಂದಿಯೇ ತನ್ನ ಒಳುಡುಪಿನಲ್ಲಿ ಮಾದಕ ವಸ್ತುಗಳನ್ನು ಜೈಲಿನೊಳಗೆ ತಂದ ಘಟನೆ ನಡೆದಿತ್ತು. ರಾಜ್ಯದ ಹಲವು ಜೈಲುಗಳಲ್ಲಿ ಇಂತಹ ಘಟನೆಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆ ನಿಮ್ಹಾನ್ಸ್ ಆಸ್ಪತ್ರೆಯ ಸಹಯೋಗದೊಂದಿಗೆ ಡ್ರಗ್ಸ್ ಮುಕ್ತ ಕಾರಾಗೃಹ ನಿರ್ಮಾಣ ಮಾಡುವ ಗುರಿಯಿಂದ ಕೈದಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಈ ಯೋಜನೆಯಡಿ ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ಗಾಂಜಾ, ಹೆರೊಯಿನ್, ಕೊಕೈನ್ ಸೇರಿದಂತೆ ವಿವಿಧ ಮಾದಕ ವಸ್ತುಗಳ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಮೊದಲ ಹಂತದಲ್ಲಿ ಎಲ್ಲಾ ಜೈಲುಗಳಲ್ಲಿ ಸುಮಾರು ಶೇ10ರಷ್ಟು ಕೈದಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರಾಗೃಹ ಇಲಾಖೆ ನೀಡಿರುವ ವಿಶೇಷ ಕಿಟ್‌ಗಳ ಮೂಲಕ ಜೈಲು ವೈದ್ಯಾಧಿಕಾರಿಗಳು ಈ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ. ಪರೀಕ್ಷೆಯಲ್ಲಿ ಕೈದಿಗಳು ಮಾದಕ ವಸ್ತು ಸೇವಿಸಿರುವುದು ಪತ್ತೆಯಾದರೆ ತಕ್ಷಣವೇ ಅವರಿಗೆ ಕೌನ್ಸೆಲಿಂಗ್ ನೀಡಲಾಗುತ್ತದೆ. ಹೆಚ್ಚು ಅಡಿಕ್ಟ್ ಆಗಿರುವ ಕೈದಿಗಳನ್ನು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗಿದೆ.

ಈ ಪರೀಕ್ಷೆಯಲ್ಲಿ ಮಾದಕ ವಸ್ತು ಸೇವನೆ ಪತ್ತೆಯಾದ ಕೈದಿಗಳ ಮೇಲೆ ಸದ್ಯಕ್ಕೆ ಯಾವುದೇ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬದಲಿಗೆ ಕೌನ್ಸೆಲಿಂಗ್ ಮತ್ತು ಚಿಕಿತ್ಸೆಯ ಮೂಲಕ ಕೈದಿಗಳನ್ನು ಸರಿಯಾದ ದಾರಿಗೆ ತರಲು ಕಾರಾಗೃಹ ಇಲಾಖೆ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular