ಬೆಂಗಳೂರು: ಡ್ರಂಕ್ ಆಂಡ್ ಡ್ರೈವ್ ತಪಾಸಣೆ ವೇಳೆ ಕಿರಿಕ್ ಮಾಡಿ ಪೊಲೀಸರಿಗೆ ಆವಾಜ್ ಹಾಕಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ.
ಪ್ರಕರಣ ಸಂಬಂಧ ನಾಲ್ವರ ವಿರುದ್ಧ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಿಶೋರ್, ಪ್ರತಾಪ್, ರಘುನಂದನ್ ಹಾಗೂ ಕಾರ್ತಿಕ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಟ್ರಾಫಿಕ್ ಪೊಲೀಸರು ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಡ್ರಂಕ್ ಆಂಡ್ ಡ್ರೈವ್ ತಪಾಸಣೆ ವೇಳೆ ಪಾನಮತ್ತ ಯುವಕ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಕಾರು ಚಾಲಕನಿಗೆ ಊದಲು ಹೇಳಿದಾಗ ಆತ ನಿರಾಕರಿಸಿದ್ದಾನೆ. ಕಾರಿನಿಂದ ಇಳಿದ ನಾಲ್ವರು ದೇವನಹಳ್ಳಿ ಟ್ರಾಫಿಕ್ ಪೊಲೀಸರ ಮೇಲೆ ದರ್ಪ ಮೆರೆದಿದ್ದಾರೆ. ಪೊಲೀಸರನ್ನು ಎಳೆದಾಡಿ ಅವಾಚ್ಯವಾಗಿ ನಿಂದಿಸ್ದಿದ್ದಾರೆ.
ಕರ್ತವ್ಯಕ್ಕೆ ಅಡ್ಡಿ, ಸಾರ್ವಜನಿಕವಾಗಿ ಅಪಮಾನ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

