HomeKarnatakaಡ್ರಂಕ್ & ಡ್ರೈವ್ ನಲ್ಲಿ ಸಿಕ್ಕಿ ಬಿದ್ದ ಚಾಲಕ: ಲಾರಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಡ್ರಂಕ್ & ಡ್ರೈವ್ ನಲ್ಲಿ ಸಿಕ್ಕಿ ಬಿದ್ದ ಚಾಲಕ: ಲಾರಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು: ಡ್ರಂಕ್ ಆಂಡ್ ಡ್ರೈವ್ ಮಾಡಿ ಸಿಕ್ಕಿಬಿದ್ದ ಚಾಲಕನೊಬ್ಬ ಲಾರಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ.

ಷಣ್ಮುಗ ಮೃತ ಲಾರಿ ಚಾಲಕ. ಪೊಲೀಸರು ಡ್ರಿಂಗ್ ಆಂಡ್ ಡ್ರೈವ್ ತಪಾಸಣೆ ವೇಳೆ ಷಣ್ಮುಗ ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ. ಹೀಗಾಗಿ ಪೊಲೀಸರು, ಚಾಲಕ ಷಣ್ಮುಗಗೆ ದಂಡ ವಿಧಿಸಿ ಬಳಿಕ ಲಾರಿಯನ್ನು ಜೆ.ಪಿ.ನಗರ ಠಾಣೆಗೆ ಎಳೆದೊಯ್ದಿದ್ದಾರೆ. ಮನನೊಂದ ಚಾಲಕ ಷಣ್ಮುಗ ಠಾಣೆಯ ಬಳಿ ನಿಲ್ಲಿಸಿದ್ದ ಲಾರಿಯಲ್ಲೇ ನೇಣು ಬಿಗಿದುಕೊಂಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 4ರಂದು ರಾತ್ರಿ ಜೆ.ಪಿ ನಗರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಲಾರಿ ಚಾಲಕ ಷಣ್ಮುಗ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವುದು ಪೊಲೀಸರಿಗೆ ಅನುಮಾನ ಬಂದಿದೆ. ಕೂಡಲೇ ಆತನನ್ನು ತಡೆದ ಪೊಲೀಸರು ಬ್ರೀತ್ ಅನಲೈಸರ್ ಮೂಲಕ ತಪಾಸಣೆ ನಡೆಸಿದಾಗ ಮದ್ಯಪಾನ ಮಾಡಿರುವುದು ದೃಢಪಟ್ಟಿದೆ. ಇದಾದ ನಂತರ ಪೊಲೀಸರು ನಿಯಮದಂತೆ ಷಣ್ಮುಗನಿಗೆ ಭಾರೀ ಮೊತ್ತದ ದಂಡ ವಿಧಿಸಿದ್ದಾರೆ. ಅಲ್ಲದೆ, ಮದ್ಯದ ಅಮಲಿನಲ್ಲಿದ್ದ ಚಾಲಕನಿಗೆ ವಾಹನ ಚಲಾಯಿಸಲು ಬಿಡದ ಪೊಲೀಸರು, ಲಾರಿಯನ್ನು ವಶಕ್ಕೆ ಪಡೆದು ಜೆ.ಪಿ ನಗರ ಪೊಲೀಸ್ ಠಾಣೆಗೆ ಎಳೆದೊಯ್ದಿದ್ದರು. ಬಳಿಕ ಚಾಲಕ ಷಣ್ಮುಗ ಅದೇ ಲಾರಿಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ಇಂದು ಬೆಳಿಗ್ಗೆ ಗಮನಿಸಿದಾಗ ಚಾಲಕ ಲಾರಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಈ ಸಂಬಂಧ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕೇಸ್ ದಾಖಲಾಗಿದೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669


For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular