ಅಮಲಿನಲ್ಲಿ ರೋಗಿಗಳಿಗೆ ಚುಚ್ಚುಮದ್ದು, ಕರ್ತವ್ಯದ ವೇಳೆ ಪಾನಮತ್ತರಾಗಿ ದುರ್ವರ್ತನೆ: ವೈದ್ಯ ಅಮಾನತು

ಬೆಂಗಳೂರು: ಕರ್ತವ್ಯದ ಸಂದರ್ಭದಲ್ಲಿ ಪಾನಮತ್ತರಾಗಿ ದುರ್ವರ್ತನೆ ತೋರಿದ ಆರೋಪದ ಮೇಲೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಅರಿವಳಿಕೆ ತಜ್ಞ ಡಾ.ಪಿ. ಸೋಮಶೇಖರ್ ಅವರನ್ನು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಅಮಾನತು ಮಾಡಿದ್ದಾರೆ.

ಆಸ್ಪತ್ರೆಗೆ ಶಸ್ತ್ರಚಿಕಿತ್ಸೆಗೆ ಬರುತ್ತಿದ್ದ ರೋಗಿಗಳಿಗೆ ಅರಿವಳಿಕೆ ನೀಡುವಾಗ ಕುಡಿದ ಅಮಲಿನಲ್ಲಿರುತ್ತಿದ್ದ ಡಾ. ಸೋಮಶೇಖರ್ ಚುಚ್ಚುಮದ್ದು ನೀಡಲು ಸಾಧ್ಯವಾಗದೆ ಓಲಾಡುತ್ತಿದ್ದರು. ಈ ಬಗ್ಗೆ ಹಲವು ದೂರುಗಳು ಬಂದಿದ್ದು, ಕಚೇರಿಗೆ ತಡವಾಗಿ ಬರುವುದು, ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗುವುದು ಕೇಳಿ ಬಂದ ಹಿನ್ನೆಲೆಯಲ್ಲಿ ನಾಲ್ಕು ಬಾರಿ ನೋಟಿಸ್ ನೀಡಲಾಗಿತ್ತು. ಇದಕ್ಕೆ ಉತ್ತರ ನೀಡದೆ ಅವರು ದುರ್ನಡತೆ ತೋರಿದ್ದರು.

ಡಾ. ಸೋಮಶೇಖರ್ ಅವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು. ವರ್ಗಾವಣೆ ಮಾಡಬೇಕೆಂದು ಚಿಕ್ಕಮಗಳೂರು ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಜಿಲ್ಲಾಧಿಕಾರಿಯವರು ಆಯುಕ್ತರಿಗೆ ವರದಿ ಸಲ್ಲಿಸಿದ್ದು, ಈ ವರದಿ ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಸೋಮಶೇಖರ್ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತು ಮಾಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read