Bengaluru : ಕುಡಿದ ಮತ್ತಿನಲ್ಲಿ ಪುಂಡರ ಹುಚ್ಚಾಟ : 30 ಕ್ಕೂ ಹೆಚ್ಚು ವಾಹನಗಳು ಜಖಂ

ಬೆಂಗಳೂರು : ಬೆಂಗಳೂರಿನಲ್ಲಿ ಕುಡಿದ ಮತ್ತಿನಲ್ಲಿ ಪುಂಡರು ಹುಚ್ಚಾಟ ಮೆರೆದಿದ್ದು, 30 ಕ್ಕೂ ಹೆಚ್ಚು ವಾಹನಗಳು ಜಖಂ ಆಗಿದೆ.

ಲಗ್ಗೆರೆಯ ರಾಜೀವ್ ಗಾಂಧಿ ನಗರದಲ್ಲಿ ಈ ಘಟನೆ ನಡೆದಿದೆ. ಸುಮಾರು 30 ಕ್ಕೂ ಹೆಚ್ಚು ವಾಹನಗಳ ಮೇಲೆ ಲಾಂಗ್ ಬೀಸಿದ ಪುಂಡರು ವಾಹನಗಳನ್ನು ಜಖಂ ಮಾಡಿದ್ದಾರೆ.

12 ಕಾರು, ಆಟೋ ಸೇರಿದಂತೆ ಹಲವು ವಾಹನಗಳು ಪುಡಿ ಪುಡಿಯಾಗಿದೆ. ಮೂವರು ಪುಂಡರು ಈ ಕೃತ್ಯ ಎಸಗಿದ್ದು, 30 ಕ್ಕೂ ಹೆಚ್ಚು ವಾಹನಗಳ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read