HomeKarnatakaBIG NEWS : 'ಜೆಡಿಎಸ್' ಮುಖಂಡ ಅಪ್ಪುಗೌಡ ಕೊಲೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

BIG NEWS : ‘ಜೆಡಿಎಸ್’ ಮುಖಂಡ ಅಪ್ಪುಗೌಡ ಕೊಲೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮಂಡ್ಯ : ಮಂಡ್ಯದಲ್ಲಿ ಸಿನಿಮಾ ಸ್ಟೈಲ್ ನಲ್ಲಿ ಜೆಡಿಎಸ್ ಮುಖಂಡ ಅಪ್ಪುಗೌಡ ಮೇಲೆ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ರಾಜಕೀಯ ವೈಶಮ್ಯದಿಂದ ಕೊಲೆ ಯತ್ನಕ್ಕೆ ಸ್ಕೆಚ್ ಹಾಕಲಾಗಿದೆ ಎನ್ನಲಾಗಿತ್ತು, ಆದರೆ ಪೊಲೀಸ್ ತನಿಖೆ ವೇಳೆ ಅಪ್ಪುಗೌಡ ಬ್ಯುಸಿನೆಸ್ ಪಾರ್ಟ್ನರ್ ಕೊಲೆಗೆ ಸ್ಕೆಚ್ ಹಾಕಿದ್ದನು ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಿಂದ ಹುಡುಗರನ್ನು ಕರೆಸಿದ ಅಪ್ಪುಗೌಡನ ಬ್ಯುಸಿನೆಸ್ ಪಾರ್ಟ್ನರ್ ಅಪ್ಪುಗೌಡ ಮುಗಿಸಲು ಸುಪಾರಿ ಕೊಟ್ಟಿದ್ದನು ಎನ್ನಲಾಗಿದೆ.ಹಲವು ವ್ಯವಹಾರಗಳಲ್ಲಿ ಉದ್ಯಮ ಪಾಲುದಾರರೂ ಆಗಿದ್ದ ಸ್ನೇಹಿತ ಮಧು ಹಾಗೂ ಅಪ್ಪುಗೌಡ ನಡುವೆ ಮನಸ್ತಾಪ ಉಂಟಾಗಿದ್ದರಿಂದ ಇಬ್ಬರೂ ಪರಸ್ಪರ ದೂರವಾಗಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಕುಖ್ಯಾತ ರೌಡಿಯೊಬ್ಬನಿಗೆ ಅಪ್ಪುಗೌಡನನ್ನು ಕೊಲೆ ಮಾಡುವಂತೆ ಮಧು ಸುಫಾರಿ ನೀಡಿದ್ದನು ಎನ್ನಲಾಗಿದೆ.

ಮಂಡ್ಯ ಜಿಲ್ಲೆಯ ಮದ್ದೂರಿ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಜೆಡಿಎಸ್ ಮುಖಂಡ ಅಪ್ಪುಗೌಡ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹತ್ಯೆಗೆ ಯತ್ನಿಸಿರುವ ಘಟನೆ ಸಿಸಿಟಿವಿಯಲ್ಲಿ ಪತ್ತೆಯಾಗಿದೆ.ಪ್ರತಿ ಶನಿವಾರ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಬರುತ್ತಿದ್ದ ಅಪ್ಪುಗೌಡ ಹತ್ಯೆಗೆ ಪ್ಲಾನ್ ಮಾಡಿದ್ದ ದುಷ್ಕರ್ಮಿಗಳು ಅಪ್ಪುಗೌಡ ಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ಅಪ್ಪುಗೌಡ ದಾಳಿಯಿಂದ ಪಾರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular