BREAKING : ರಾಜ್ಯದಲ್ಲಿ ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಣೆ |School Holiday

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳ್ಲಲಿ ಮಳೆಯ ಅಬ್ಬರ ಜೋರಾಗಿದ್ದು, ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳುರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಲೆಯಿಂದಾಗಿ ನದಿಗಳಲ್ಲಿ ಒಳಹರಿವು ಹೆಚ್ಚಾಗಿದ್ದು, ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.
ಚಿಕ್ಕಮಗಳೂರಿನ ಮೂಡಿಗೆರೆ, , ಎನ್ ಆರ್ ಪುರ, ಶೃಂಗೇರಿ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೂಡಿಗೆರೆ, ಎನ್ ಆರ್ ಪುರ, ಕೊಪ್ಪ, ಶೃಂಗೇರಿ, ಕಳಸ ತಾಲೂಕುಗಳಲ್ಲಿ ಅಂಗನವಾಡಿ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಿಸಿದ ಡಿಸಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ತಹಶಿಲ್ದಾರ್ ಆದೇಶಿಸಿದ್ದಾರೆ. ಅಂಗನವಾಡಿಯಿಂದ ಪ್ರೌಢಶಾಲೆಯವರೆಗೆ ಮಾತ್ರ ರಜೆ ಘೋಷಣೆ ಮಾಡಲಾಗಿದ್ದು, ಎಂದಿನಂತೆ ಕಾಲೇಜುಗಳು ಓಪನ್ ಆಗಿರುತ್ತವೆ.

ಹಾಸನ ಜಿಲ್ಲೆಯ 3 ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾಸನ, ಸಕಲೇಶಪುರ , ಆಲೂರು, ಹೊಳೆನರಸೀಪುರ, ಅರಕಲಗೂಡು ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.

ಕೊಡಗು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜೂನ್ 26ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜಿಗೆ ರಜೆ ನೀಡಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂರು ತಾಲುಕಿನ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ, ಖಾನಾಪುರ, ಕಿತ್ತೂರು ತಾಲೂಕಿನಲ್ಲಿ ಮಾತ್ರ ಜೂನ್ 26ರಂದು ಸರ್ಕಾರಿ, ಅನುದಾನ ರಹಿತ, ಅನುದಾನ ಸಹಿತ ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read