ಬೆಂಗಳೂರು: ಒಡಿಶಾ ಮತ್ತು ಆಂಧ್ರಪ್ರದೇಶ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೆಪ್ಟೆಂಬರ್ 16ರ ವರೆಗೆ ಮಳೆ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಜೋರಾಗಿರುತ್ತದೆ. ಉತ್ತರ ಮತ್ತು ದಕ್ಷಿಣ ಕರ್ನಾಟಕ ಭಾಗದ ಅನೇಕ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಮತ್ತಷ್ಟು ಬಿರುಸಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೀದರ್, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಳಗಾವಿ, ಕೊಪ್ಪಳ, ಯಾದಗಿರಿ, ಗದಗ, ಧಾರವಾಡ ಜಿಲ್ಲೆಯ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಸೆ. 14ರಂದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅದೇ ರೀತಿ ಉತ್ತರ ಒಳನಾಡಿನಲ್ಲಿ ಭಾನುವಾರದಿಂದ ಮಳೆ ಜೋರಾಗಲಿದೆ. ಕಲಬುರಗಿ, ವಿಜಯಪುರ, ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.