HomeLatest News ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಸೆ. 16ರ ವರೆಗೆ ಮಳೆ ಆರ್ಭಟ: ಯೆಲ್ಲೋ, ಆರೆಂಜ್ ಅಲರ್ಟ್

 ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಸೆ. 16ರ ವರೆಗೆ ಮಳೆ ಆರ್ಭಟ: ಯೆಲ್ಲೋ, ಆರೆಂಜ್ ಅಲರ್ಟ್

ಬೆಂಗಳೂರು: ಒಡಿಶಾ ಮತ್ತು ಆಂಧ್ರಪ್ರದೇಶ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೆಪ್ಟೆಂಬರ್ 16ರ ವರೆಗೆ ಮಳೆ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಜೋರಾಗಿರುತ್ತದೆ. ಉತ್ತರ ಮತ್ತು ದಕ್ಷಿಣ ಕರ್ನಾಟಕ ಭಾಗದ ಅನೇಕ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಮತ್ತಷ್ಟು ಬಿರುಸಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೀದರ್, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಳಗಾವಿ, ಕೊಪ್ಪಳ, ಯಾದಗಿರಿ, ಗದಗ, ಧಾರವಾಡ ಜಿಲ್ಲೆಯ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಸೆ. 14ರಂದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅದೇ ರೀತಿ ಉತ್ತರ ಒಳನಾಡಿನಲ್ಲಿ ಭಾನುವಾರದಿಂದ ಮಳೆ ಜೋರಾಗಲಿದೆ. ಕಲಬುರಗಿ, ವಿಜಯಪುರ, ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular