ಕೈಮುಗಿಯುತ್ತಿದ್ದೇವೆ ದಯಮಾಡಿ ಅನ್ನದಾತನಿಗೆ ನ್ಯಾಯ ಒದಗಿಸಿ : ಕಾವೇರಿ ಹೋರಾಟಕ್ಕೆ ನಟ ದುನಿಯಾ ವಿಜಯ್ ಸಾಥ್!

 

ಬೆಂಗಳೂರು : ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ವಿರುದ್ಧ ಕನ್ನಡ ಚಿತ್ರರಂಗ ದನಿ ಎತ್ತಿದ್ದು, ಹಿರಿಯ ನಟರಾದ ಅನಂತ್ ನಾಗ್, ಶಿವರಾಜ್ ಕುಮಾರ್, ದರ್ಶನ್, ಸುದೀಪ್ ಕಾವೇರಿ ನೀರು ಸಮಸ್ಯೆ ಪರಿಹಾರಕ್ಕೆ ವಿನಂತಿಸಿದ್ದಾರೆ.

ಕಾವೇರಿ ನೀರು ಪರಿಹಾರದ ಕುರಿತಂತೆ ಇದೀಗ ನಟ ದುನಿಯಾ ವಿಜಯ್ ಕೂಡ ಮಾತನಾಡಿದ್ದು, ಕಾವೇರಿ ಈ ನಾಡಿಗೆ ಬರೀ ನೀರಲ್ಲ ಈ ಮಣ್ಣಿನ ಆಳಕ್ಕಿಳಿದ ಜಲರೂಪದ ಬೇರು , ಪ್ರತಿಯೊಬ್ಬ ಕನ್ನಡಿಗನೂ ತಲೆಮೇಲೆ ಹೊತ್ತು ತಿರುಗೋ ದೈವರೂಪದ ತೇರು . ಇಷ್ಟು ದಿನ ಆಕಾಶಕ್ಕೆ ಮುಖ ಮಾಡಿ ನಿಂತಿದ್ದ ಅನ್ನದಾತ ಇಂದು ನ್ಯಾಯಾಲಯದ ಕಡೆ ಮುಖ ಮಾಡಿ ನಿಂತಿದ್ದಾನೆ . ಕಣ್ಣ ಮುಂದೆ ನೀರು ಹರಿದಂತೆ ಅವನ ಕಣ್ಣಿನಿಂದ ನೀರು ಹರಿಯುತ್ತದೆ . ನ್ಯಾಯಕ್ಕಾಗಿ ಕೈಚಾಚುತ್ತಿಲ್ಲ ಒಕ್ಕೊರಲಿನಿಂದ ಕೈಮುಗಿಯುತ್ತಿದ್ದೇವೆ ದಯಮಾಡಿ ಅನ್ನದಾತನಿಗೆ ನ್ಯಾಯ ಒದಗಿಸಿ ಎಂದು ಹೇಳಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read