ಬೆಂಗಳೂರು: ನಟ ದುನಿಯಾ ವಿಜಯ್ ಹಾಗೂ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ನ್ಯಾಯಾಲಯದ ಆದೇಶದ ಮೂಲಕ ತೆರೆ ಬಿದ್ದ ಬೆನ್ನಲ್ಲೇ, ದುನಿಯಾ ವಿಜಯ್ ಅವರು ಸಾಮಾಜಿಕ ಜಾಲತಾಣದಲ್ಲಿ ಮೊದಲ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ಅಭಿಮಾನಿಗಳು, ಮಾಧ್ಯಮ ಮಿತ್ರರು ಹಾಗೂ ತಮ್ಮ ಪರ ನಿಂತವರಿಗೆ ಧನ್ಯವಾದ ಅರ್ಪಿಸಿರುವ ಅವರು, ಮುಂದಿನ ದಿನಗಳಲ್ಲಿ ಈ ವೈಯಕ್ತಿಕ ವಿಚಾರದ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ.
ದುನಿಯಾ ವಿಜಯ್ ಹೇಳಿದ್ದೇನು?
“ಸಮಸ್ತ ಅಭಿಮಾನಿಗಳಲ್ಲಿ ಹಾಗೂ ನನ್ನ ಬದುಕೆಂಬುದಕ್ಕೂ, ಜೊತೆಯಾಗಿ ನಿಂತ ಮಾಧ್ಯಮ ಮಿತ್ರರಲ್ಲಿ ಕಳಕಳಿಯ ಮನವಿ…” ಎಂದು ತಮ್ಮ ಪೋಸ್ಟ್ ಆರಂಭಿಸಿರುವ ದುನಿಯಾ ವಿಜಯ್, ನ್ಯಾಯಾಲಯದ ಆದೇಶವನ್ನು ಗೌರವದಿಂದ ಸ್ವೀಕರಿಸಿರುವುದಾಗಿ ಹೇಳಿದ್ದಾರೆ.
“ನ್ಯಾಯಾಲಯದ ಆದೇಶಕ್ಕೆ ಶಿರಸಾದುರ್ಗಿ ಪ್ರಣಾಮಗಳನ್ನು ಸಲ್ಲಿಸಿ ಶರಣಾಗಿದ್ದೇನೆ. ಕಾನೂನಿನ ಮೇಲೆ ನನಗೆ ನಂಬಿಕೆ ಮತ್ತು ಗೌರವವಿದೆ. ನನ್ನ ಮೇಲಿನ ಮಾನಸಿಕ ಕ್ರೌರ್ಯವನ್ನು ಪರಿಗಣಿಸಿ, ಮಾನ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಡಿ.ಕೆ. ಸಿಂಗ್ ಹಾಗೂ ಶ್ರೀ ಶಾಂತಿಭೂಷಣ್ ಅವರ ಆದೇಶಕ್ಕೆ ತಲೆಬಾಗಿದ್ದೇನೆ. ಈ ಆದೇಶಕ್ಕೆ ನನ್ನ ಗೌರವಪೂರ್ವಕ ಧನ್ಯವಾದಗಳು.”ಹಾಗೆಯೇ ತಮ್ಮ ಪರವಾಗಿ ವಾದಿಸಿದ ಕಾನೂನು ತಜ್ಞರು ಹಾಗೂ ವಕೀಲರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.
ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡಲ್ಲ
ವಿಚ್ಛೇದನಕ್ಕೆ ಸಂಬಂಧಿಸಿದ ವಿಚಾರವನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಅಥವಾ ಸಾರ್ವಜನಿಕವಾಗಿ ಚರ್ಚಿಸಲು ತಾವು ಇಚ್ಛಿಸುವುದಿಲ್ಲ ಎಂದು ದುನಿಯಾ ವಿಜಯ್ ಸ್ಪಷ್ಟಪಡಿಸಿದ್ದಾರೆ. ತಮ್ಮ ಹೆಣ್ಣುಮಕ್ಕಳು ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರಿಗೆ ಯಾವುದೇ ಮುಜುಗರವಾಗಬಾರದು ಎಂಬುದನ್ನೂ ಅವರು ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಹೊಸ ಬದುಕಿನತ್ತ ಹೆಜ್ಜೆ
“ಮಕ್ಕಳ ಭವಿಷ್ಯ ಹಾಗೂ ಹೆತ್ತವರನ್ನು ಗಮನದಲ್ಲಿಟ್ಟುಕೊಂಡು, ನನ್ನ ವೈಯಕ್ತಿಕ ಸಂಸಾರಿಕ ವಿಚಾರಕ್ಕೆ ನ್ಯಾಯಾಲಯ ನೀಡಿದ ಆದೇಶವನ್ನು ಆತ್ಮಸಾಕ್ಷಿಯಿಂದ ಸ್ವೀಕರಿಸಿದ್ದೇನೆ. ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ ಹಾಕುತ್ತಿದ್ದೇನೆ. ನಿಮ್ಮ ಆಶೀರ್ವಾದ ಮತ್ತು ಹಾರೈಕೆ ಹೀಗೆಯೇ ಇರಲಿ” ಎಂದು ದುನಿಯಾ ವಿಜಯ್ ಮನವಿ ಮಾಡಿದ್ದಾರೆ. ಕೊನೆಯಲ್ಲಿ “ಧನ್ಯವಾದಗಳು, ನಿಮ್ಮ ದುನಿಯಾ ವಿಜಯ್” ಎಂದು ತಮ್ಮ ಪೋಸ್ಟ್ ಮುಕ್ತಾಯಗೊಳಿಸಿದ್ದಾರೆ.
ದುನಿಯಾ ವಿಜಯ್ ಪೋಸ್ಟ್
”ಸಮಸ್ತ ಅಭಿಮಾನಿಗಳಲ್ಲಿ ಹಾಗೂ ನನ್ನ ಬದುಕೆಂಬುದಕ್ಕೂ, ಜೋತೆಯಾಗಿ ನಿಂತ ಮಾಧ್ಯಮ ಮಿತ್ರರಲ್ಲಿ ಕಳಕಳಿಯ ಮನವಿ… “ನ್ಯಾಯಾಲಯದ ಆದೇಶಕ್ಕೆ ಶಿರಸಾದುರ್ಗಿ ಪ್ರಣಾಮಗಳನ್ನು ಸಲ್ಲಿಸಿ ಶರಣಾಗಿದ್ದೇನೆ. ಕಾನೂನಿನ ಮೇಲೆ ನನಗೆ ನಂಬಿಕೆ ಮತ್ತು ಗೌರವವಿದೆ. ನನ್ನ ಮೇಲಿನ ಮಾನಸಿಕ ಕ್ರೌರ್ಯವನ್ನು ಪರಿಗಣಿಸಿ, ಮಾನ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಡಿ.ಕೆ. ಸಿಂಗ್ ಹಾಗೂ ಶ್ರೀ ಶಾಂತಿಭೂಷಣ್ ಅವರ ಆದೇಶಕ್ಕೆ ತಲೆಬಾಗಿದ್ದೇನೆ. ಈ ಆದೇಶಕ್ಕೆ ನನ್ನ ಗೌರವಪೂರ್ವಕ ಧನ್ಯವಾದಗಳು. ಹಾಗೆಯೇ ನನ್ನ, ವಕೀಲರಾದ ಹಿರಿಯ ಕಾನೂನು ತಜ್ಞರು ಹಾಗೂ ಯುಕ್ತ ಅನಿಲ್ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ.” ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಮಾಧ್ಯಮಗಳಲ್ಲಿ ಅಥವಾ ಸಾರ್ವಜನಿಕವಾಗಿ ಮಾತನಾಡಲು ಇಚ್ಛಿಸುವುದಿಲ್ಲ. ನನ್ನ ಹೆಣ್ಣುಮಕ್ಕಳು ವಯಸ್ಸಾಗಿದ್ದು, ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನ ಗಳಿಸಿದ್ದಾರೆ; ಅವರಿಗೆ ಯಾವುದೇ ಮುಜುಗರವಾಗಬಾರದು. ನಾಗರತ್ನ ಜೊತೆ ವಿಚ್ಛೇದನದ ಬಳಿಕ ನಟ ದುನಿಯಾ ವಿಜಯ್ ಮೊದಲ ಪೋಸ್ಟ್ ; ಏನಂದ್ರು ಗೊತ್ತಾ..?ಮಕ್ಕಳ ಭವಿಷ್ಯ ಹಾಗೂ ಹೆತ್ತವರಿಂದ, ನನ್ನ ವೈಯಕ್ತಿಕ ಸಂಸಾರಿಕ ವಿಚಾರಕ್ಕೆ ನ್ಯಾಯಾಲಯ ನೀಡಿದ ಆದೇಶವನ್ನು ಆತ್ಮಸಾಕ್ಷಿಯಿಂದ ಸ್ವೀಕರಿಸಿದ್ದೇನೆ, ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ ಹಾಕುತ್ತಿದ್ದೇನೆ. ನಿಮ್ಮ ಆಶೀರ್ವಾದ ಮತ್ತು ಹಾರೈಕೆ ಹೀಗೆಯೇ ಇರಲಿ”.
ದುನಿಯಾ ವಿಜಯ್-ನಾಗರತ್ನ ವೈವಾಹಿಕ ಜೀವನ ಅಂತ್ಯ
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ಅವರ ಮೊದಲ ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಕಾನೂನಾತ್ಮಕವಾಗಿ ತೆರೆಬಿದ್ದಿದೆ. ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚ್ಛೇದನ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಪಡಿಸಿದ್ದು, ದುನಿಯಾ ವಿಜಯ್ ಅವರಿಗೆ ವಿಚ್ಛೇದನ ಮಂಜೂರು ಮಾಡಿದೆ. ಜೊತೆಗೆ ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ ನೀಡುವಂತೆ ಆದೇಶಿಸಿದೆ.
ನ್ಯಾಯಾಲಯದ ಮಹತ್ವದ ತೀರ್ಪು
ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಹೆಚ್. ಶಾಂತಿಭೂಷಣ್ ಅವರನ್ನೊಳಗೊಂಡ ಪೀಠ ಪ್ರಕರಣದ ವಿಚಾರಣೆ ನಡೆಸಿ ಅಂತಿಮ ತೀರ್ಪು ನೀಡಿದೆ. ವಿಚ್ಛೇದನ ಮಂಜೂರು ಮಾಡುವುದರ ಜೊತೆಗೆ ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ ಪಾವತಿಸುವಂತೆ ದುನಿಯಾ ವಿಜಯ್ ಅವರಿಗೆ ನಿರ್ದೇಶನ ನೀಡಲಾಗಿದೆ.
ಮೂವರು ಮಕ್ಕಳ ಭವಿಷ್ಯ ಪರಿಗಣನೆ
ವಿಚಾರಣೆ ವೇಳೆ ನಾಗರತ್ನ ಹಾಗೂ ದಂಪತಿಯ ಮೂವರು ಮಕ್ಕಳ ಭವಿಷ್ಯ ಮತ್ತು ಜೀವನ ನಿರ್ವಹಣೆ ಸೇರಿದಂತೆ ಹಲವು ಅಂಶಗಳನ್ನು ನ್ಯಾಯಾಲಯ ಪರಿಗಣಿಸಿದೆ. ದುನಿಯಾ ವಿಜಯ್ ಅವರ ಸಾಮಾಜಿಕ ಸ್ಥಾನಮಾನ, ವೃತ್ತಿಪರ ಆದಾಯ ಹಾಗೂ ಹಣಕಾಸಿನ ಸ್ಥಿತಿಗತಿಗಳನ್ನು ಗಮನದಲ್ಲಿಟ್ಟುಕೊಂಡು ₹2 ಕೋಟಿ ಜೀವನಾಂಶ ನಿಗದಿಪಡಿಸಲಾಗಿದೆ ಎಂದು ವರದಿಯಾಗಿದೆ.
ಹಲವು ವರ್ಷಗಳ ವಿವಾದಕ್ಕೆ ಅಂತ್ಯ
ದುನಿಯಾ ವಿಜಯ್ ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಈ ವಿವಾದ ಹಲವು ವರ್ಷಗಳಿಂದ ಸುದ್ದಿಯಲ್ಲಿತ್ತು. ಇದೀಗ ಕರ್ನಾಟಕ ಹೈಕೋರ್ಟ್‌ನ ತೀರ್ಪಿನೊಂದಿಗೆ ದುನಿಯಾ ವಿಜಯ್ ಹಾಗೂ ನಾಗರತ್ನ ಅವರ ದಾಂಪತ್ಯಕ್ಕೆ ಅಧಿಕೃತವಾಗಿ ಅಂತ್ಯ ಸಿಕ್ಕಂತಾಗಿದೆ.
📄 Official Documents / Supporting Documents

