ಡೂಪ್ಲಿಕೇಟ್ ಸಿಎಂ ಡಿ.ಕೆ ಶಿವಕುಮಾರ್ ಗೆ ಸೋಲಿನ ಭೀತಿ ಕಾಡುತ್ತಿದೆ : ಜೆಡಿಎಸ್ ತಿರುಗೇಟು

ಬೆಂಗಳೂರು : ಡೂಪ್ಲಿಕೇಟ್ ಸಿಎಂ ಡಿಕೆ ಶಿವಕುಮಾರ್ ಗೆ ಸೋಲಿನ ಭೀತಿ ಕಾಡುತ್ತಿದೆ ಎಂದು ಜೆಡಿಎಸ್ ತಿರುಗೇಟು ನೀಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ ಕಾಂಗ್ರೆಸಿಗರಿಗೆ, ಅದರಲ್ಲೂ ಡೂಪ್ಲಿಕೇಟ್ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಸೋಲಿನ ಭೀತಿ ಎಷ್ಟರಮಟ್ಟಿಗೆ ಕಾಡುತ್ತಿದೆ ಎಂದರೆ, ಯುವ ಕಾಂಗ್ರೆಸ್ ಕಾರ್ಯಕರ್ತರಿಗೇ ಕಾಂಗ್ರೆಸ್ ಶಾಲು ಹಾಕಿ, ಅವರನ್ನು ಜೆಡಿಎಸ್ ಕಾರ್ಯಕರ್ತರು ಎಂದು ಬಿಂಬಿಸಿ, ಅವರೆಲ್ಲ ಕಾಂಗ್ರೆಸ್ ಸೇರಿದ್ದಾರೆ ಎಂದು ಪ್ರಚಾರ ಪಡೆಯುತ್ತಿದ್ದಾರೆ. ಸೋಲಿನ ಭೀತಿ, ಹತಾಶೆ ಎಂತೆಂತಹ ಗಿಮಿಕ್ ಗಳನ್ನು ಮಾಡಿಸುತ್ತದೆ ಎನ್ನುವುದಕ್ಕೆ ಇದು ಜೀವಂತ ಸಾಕ್ಷಿ ಎಂದು ಜೆಡಿಎಸ್ ತಿರುಗೇಟು ನೀಡಿದೆ.

ನಿನ್ನೆ ತಡರಾತ್ರಿ ಮಿಡ್ ನೈಟ್ ಆಪರೇಷನ್ ಮಾಡಿಸಿದ ಡಿಸಿಎಂ ಡಿಕೆ ಶಿವಕುಮಾರ್ 300 ಕ್ಕೂ ಹೆಚ್ಚು ಮಂದಿಯನ್ನು ಕಾಂಗ್ರೆಸ್ ಸೇರ್ಪಡೆ ಮಾಡಿಸಿದ್ದರು. ಈ ವಿಚಾರಕ್ಕೆ ಜೆಡಿಎಸ್ ಟ್ವೀಟ್ ಮೂಲಕ ಕಿಡಿಕಾರಿದೆ.

https://twitter.com/JanataDal_S/status/1778653951191113998

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read