HomeKarnatakaBIG NEWS : ದಸರಾ ಆನೆ ಅರ್ಜುನನ ಸಮಾಧಿ ವಿರೂಪ ಪ್ರಕರಣ ; ಆರೋಪಿ ವಿರುದ್ಧ...

BIG NEWS : ದಸರಾ ಆನೆ ಅರ್ಜುನನ ಸಮಾಧಿ ವಿರೂಪ ಪ್ರಕರಣ ; ಆರೋಪಿ ವಿರುದ್ಧ ‘FIR’ ದಾಖಲು

ಬೆಂಗಳೂರು : ದಸರಾ ಆನೆ ಅರ್ಜುನನ ಸಮಾಧಿ ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.

ಸಕಲೇಶಪುರ ತಾಲ್ಲೂಕಿನ ಯಸಳೂರು ವಲಯ ಅರಣ್ಯಾಧಿಕಾರಿ ಎಚ್ಡಿ ಕೋಟೆಯ ನವೀನ್ ವಿರುದ್ದ ಎಫ್ಐಆರ್ ದಾಖಲಾಗಿದೆ . ತಾವು ದರ್ಶನ್ ಅಭಿಮಾನಿ ಎಂದು ಹೇಳಿಕೊಂಡು ನವೀನ್ ಮತ್ತು ಇತರರು, ಮೀಸಲು ಅರಣ್ಯದೊಳಗೆ ಅತಿಕ್ರಮವಾಗಿ ಪ್ರವೇಶ ಮಾಡಿ ಸಮಾಧಿಯ ಮಣ್ಣು ಬಗೆದಿದ್ದರು. ಅನಧಿಕೃತವಾಗಿ ಜನರಿಂದ ಹಣ ಸುಲಿಗೆ ಮಾಡಿ ಸಮಾಧಿ ಬಗೆದು ವಿರೂಪಗೊಳಿಸಿದ್ದಾರೆ ಎಂದು ಜನರು ಆರೋಪಿಸಿದ್ದರು. ಈ ಹಿನ್ನಲೆ ಪ್ರಕರಣ ದಾಖಲಿಸಲಾಗಿದೆ.

ಮೈಸೂರು ದಸರಾ ಅಂಬಾರಿ ಹೊರುತ್ತಿದ್ದ ಕ್ಯಾಪ್ಟನ್ ಅರ್ಜುನ ಆನೆ 2023 ಡಿಸೆಂಬರ್ ನಲ್ಲಿ ಸಕಲೇಶಪುರದಲ್ಲಿ ನಡೆದ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದು, ಅರ್ಜುನ ಆನೆಗೆ ಸ್ಮಾರಕ ನಿರ್ಮಿಸುವುದಾಗಿ ಸರ್ಕಾರ ಹೇಳಿತ್ತು.ಅರ್ಜುನ ಆನೆ ಸ್ಮಾರಕ ಹೆಸರಲ್ಲಿ ವ್ಯಕ್ತಿಯೊಬ್ಬ ಅಕ್ರಮವಾಗಿ ಹಣ ಸಂಗ್ರಹಿಸುತ್ತಿರುವ ಆರೋಪ ಕೇಳಿ ಬಂದಿದೆ. ಮೈಸೂರು ಜಿಲ್ಲೆಯ ನವೀನ್ ಹೆಚ್.ಎನ್. ಎಂಬುವರು ಅರ್ಜುನ ಪಡೆ ಎಂಬ ಗ್ರೂಪ್ ಕ್ರಿಯೇಟ್ ಮಾಡಿ ಅರ್ಜುನ ಆನೆ ಸ್ಮಾರಕಕ್ಕೆ ಆರ್ಥಿಕ ನೆರವು ಕೋರಿದ್ದಾರೆ. ಇದನ್ನು ನಂಬಿದ ನೂರಾರು ಜನ ಹಣದ ಸಹಾಯ ಮಾಡಿದ್ದಾರೆ. ಮೈಸೂರಿನ ಯುವಕ ನವೀನ್ ಖಾತೆಗೆ ಲಕ್ಷಾಂತರ ರೂಪಾಯಿ ಹಣ ಜಮಾ ಆಗಿದೆ ಎಂದು ಮಲೆನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಸಾಗರ್ ಆರೋಪಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular