HomeKarnatakaಶೆಟ್ಟರ್ ಬಳಿಕ ಬಿಜೆಪಿಯಿಂದ ಮತ್ತೊಬ್ಬ ಮಾಜಿ ಸಿಎಂ ಹೊರಕ್ಕೆ...? ಅಚ್ಚರಿ ಮೂಡಿಸಿದ ಡಿವಿಎಸ್ ಹೇಳಿಕೆ

ಶೆಟ್ಟರ್ ಬಳಿಕ ಬಿಜೆಪಿಯಿಂದ ಮತ್ತೊಬ್ಬ ಮಾಜಿ ಸಿಎಂ ಹೊರಕ್ಕೆ…? ಅಚ್ಚರಿ ಮೂಡಿಸಿದ ಡಿವಿಎಸ್ ಹೇಳಿಕೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯಾದ ಬಳಿಕ ನನ್ನ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಡಿ.ವಿ. ಸದಾನಂದ ಗೌಡ ಕುತೂಹಲದ ಹೇಳಿಕೆ ನೀಡಿದ್ದಾರೆ.

ಬಿಜೆಪಿ ನನಗೆ ಎಲ್ಲವನ್ನು ನೀಡಿದೆ. ನಾನು ಪಕ್ಷಕ್ಕೆ ಏನು ನೀಡಬೇಕೆಂಬುದನ್ನು ನೋಡಬೇಕಿದೆ. ನನ್ನ ಮುಂದಿನ ನಿರ್ಧಾರ ಏನು ಎಂದು ಈಗಲೇ ಹೇಳುವುದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಆಗುತ್ತಿದ್ದಂತೆಯೇ ಪತ್ರಿಕಾಗೋಷ್ಠಿ ಕರೆದು ಹೇಳುತ್ತೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನಗೂ ಹಳೆ ಮೈಸೂರು ಸೇರಿ ರಾಜ್ಯಾದ್ಯಂತ ಹಿತೈಷಿಗಳು, ಅಭಿಮಾನಿಗಳು ಇದ್ದಾರೆ ಎಂದು ಭಾವಿಸುವೆ. ಪಕ್ಷದ ಹೊಸ ರಾಜ್ಯಾಧ್ಯಕ್ಷರ ನೇಮಕವಾಗುತ್ತಿದ್ದಂತೆ ನನ್ನ ಅಭಿಪ್ರಾಯ ತಿಳಿಸುತ್ತೇನೆ. ಈಗಲೇ ನಿರ್ಧಾರ ಹೇಳಿ ಪಕ್ಷಕ್ಕೆ ಮುಜುಗರ ಉಂಟುಮಾಡುವುದಿಲ್ಲ. ಆ ನಿರ್ಧಾರ ಏನೆಂಬುದನ್ನು ಈಗಲೇ ಹೇಳಲಾರೆ ಎಂದು ತಿಳಿಸಿದ್ದಾರೆ.

ಸದಾನಂದಗೌಡ ಅವರು ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷ ತೊರೆಯುವ ಸಾಧ್ಯತೆ ಇದೆ ಎಂದೆಲ್ಲಾ ರಾಜಕೀಯ ವಲಯದಲ್ಲಿ ಚರ್ಚೆಯಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular