HomeKarnatakaBIG NEWS: ರಾಜ್ಯ ಬಿಜೆಪಿಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಮಾಜಿ ಸಿಎಂ ಡಿವಿಎಸ್ ನಿವಾಸದಲ್ಲಿ ನಾಯಕರ...

BIG NEWS: ರಾಜ್ಯ ಬಿಜೆಪಿಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಮಾಜಿ ಸಿಎಂ ಡಿವಿಎಸ್ ನಿವಾಸದಲ್ಲಿ ನಾಯಕರ ಪ್ರತ್ಯೇಕ ಸಭೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೊಂದು ಸಭೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ನಿವಾಸದಲ್ಲಿ ಸಭೆ ನಡೆದಿದೆ.

ಬೆಂಗಳೂರಿನ ಸಂಜಯನಗರದಲ್ಲಿರುವ ಡಿವಿಎಸ್ ನಿವಾಸದಲ್ಲಿ ಸಭೆ ನಡೆದಿದ್ದು, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಸಂಸದರಾದ ಬಸವರಾಜ ಬೊಮ್ಮಾಯಿ, ಡಾ. ಕೆ. ಸುಧಾಕರ್, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದಾರೆ.

ಕೋರ್ ಕಮಿಟಿ ಸಭೆಯ ಜಟಾಪಟಿಯ ನಂತರ ಡಿವಿಎಸ್ ನಿವಾಸದಲ್ಲಿ ಹಿರಿಯ ನಾಯಕರ ಸಭೆ ನಡೆದಿರುವುದು ಭಾರಿ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಬಿಜೆಪಿಯಲ್ಲಿ ಬಿ.ವೈ. ವಿಜಯೇಂದ್ರ, ಯತ್ನಾಳ್ ಬಣಗಳ ತಿಕ್ಕಾಟದ ನಡುವೆ ಇಂದು ಶ್ರೀರಾಮುಲು ಅಸಮಾಧಾನ ಸ್ಪೋಟಗೊಂಡಿದೆ. ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಎಲ್ಲರನ್ನೂ ಸಮಾಧಾನಪಡಿಸಲು ಪ್ರಯತ್ನ ನಡೆಸಿದ್ದಾರೆ. ಆದರೆ ಇದೇ ವೇಳೆ ಡಿ.ವಿ. ಸದಾನಂದಗೌಡರ ನಿವಾಸದಲ್ಲಿ ಮತ್ತೊಂದು ಸಭೆ ನಡೆದಿರುವುದು ರಾಜಕೀಯ ವಲಯಲ್ಲಿ ಚರ್ಚೆಗೆ ಕಾರಣವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular