HomeKarnatakaBREAKING : ಡಿವೈಎಸ್ಪಿ M.K 'ಗಣಪತಿ' ಆತ್ಮಹತ್ಯೆ ಕೇಸ್ : ಸಚಿವ ಕೆ.ಜೆ ಜಾರ್ಜ್ ಗೆ...

BREAKING : ಡಿವೈಎಸ್ಪಿ M.K ‘ಗಣಪತಿ’ ಆತ್ಮಹತ್ಯೆ ಕೇಸ್ : ಸಚಿವ ಕೆ.ಜೆ ಜಾರ್ಜ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ಬೆಂಗಳೂರು : ಡಿವೈಎಸ್’ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ ಜಾರ್ಜ್ ಗೆ ಬಿಗ್ ರಿಲೀಫ್ ಸಿಕ್ಕಿದೆ.

ಡಿವೈಎಸ್’ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ ಜಾರ್ಜ್ ಪಾತ್ರ ಇಲ್ಲ ಎಂಬ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದು ಡಿವೈಎಸ್’ಪಿ ಗಣಪತಿ ಸಹೋದರಿ ಮೇಲ್ಮನವಿಯನ್ನು ವಜಾಗೊಳಿಸಿದೆ.

ಮಂಗಳೂರು ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದ ಗಣಪತಿ 2016 ಜುಲೈ 7 ರಂದು ಮಡಿಕೇರಿಯ ವಿನಾಯಕ ಲಾಡ್ಜ್ನ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಶರಣಾಗುವ ಮುನ್ನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದ ಗಣಪತಿ ಅವರು, ಅಂದಿನ ಗೃಹ ಸಚಿವ ಕೆ. ಜೆ. ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ. ಎಂ. ಪ್ರಸಾದ್ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular