HomeKarnatakaBIG NEWS: ಡಿವೈ ಎಸ್ ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ಕೇಸ್ ದಾಖಲು: ಮತ್ತೋರ್ವ ಮಹಿಳೆಯಿಂದ...

BIG NEWS: ಡಿವೈ ಎಸ್ ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ಕೇಸ್ ದಾಖಲು: ಮತ್ತೋರ್ವ ಮಹಿಳೆಯಿಂದ ಲೈಂಗಿಕ ದೌರ್ಜನ್ಯ ಆರೋಪ

ತುಮಕೂರು: ಮಹಿಳೆ ಮೇಲೆ ಕಚೇರಿಯಲ್ಲಿಯೇ ಲೈಂಗಿಕ ದೌರ್ಜನ್ಯವೆಸಗಿದ್ದ ಮಧುಗಿರಿ ಡಿವೈ ಎಸ್ ಪಿ ವಿರುದ್ಧ ಮತ್ತೊರ್ವ ಮಹಿಳೆ ದೂರು ದಾಖಲಿಸಿದ್ದಾರೆ.

ದೂರು ನೀಡಲು ಕಚೇರಿಗೆ ಬಂದಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಧುಗಿರಿ ಡಿವೈ ಎಸ್ ಪಿ ರಾಮಚಂದ್ರಪ್ಪ ವಿರುದ್ಧ ಇದೀಗ ಮತ್ತೋರ್ವ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದು, ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊರಟಗೆರೆ ಮೂಲದ ಮಹಿಳೆಯೊಬ್ಬರಿಗೆ ನಿವೇಶನ ನೀಡುವುದಾಗಿ ಹೇಳಿ ವ್ಯಕ್ತಿಯೋರ್ವ ಹಣ ಪಡೆದು ವಂಚಿಸಿದ್ದ. ಈ ಬಗ್ಗೆ ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡುವಂತೆ ಕೋರಿ ಮಹಿಳೆ ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಮಾಡಿದ್ದರು. ಮಹಿಳೆಯ ದೂರಿನ ಹಿನ್ನೆಲೆಯಲ್ಲಿ ಮಹಿಳಾ ಆಯೋಗ, ಈ ಸಂಬಂಧ ವಿಚಾರಣೆ ನಡೆಸುವಂತೆ ತುಮಕೂರು ಜಿಲ್ಲಾ ಪೊಲೀಸ್ ಕಚೇರಿಗೆ ಪತ್ರ ಬರೆದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ವಿಚಾರಣೆ ನೆಪದಲ್ಲಿ ಕಚೇರಿಗೆ ಕರೆಸಿಕೊಂಡಿದ್ದ ಡಿವೈ ಎಸ್ ಪಿ ರಾಮಚಂದ್ರಪ್ಪ, ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಹಿಳೆ ಮಧುಗಿರಿ ಠಾಣೆಯಲ್ಲಿ ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular