HomeKarnatakaಇ-ಖಾತಾ ಗೊಂದಲ ಬೆನ್ನಲ್ಲೇ ಆಸ್ತಿ ಖರೀದಿ, ಮಾರಾಟಗಾರರಿಗೆ ಮತ್ತೊಂದು ಶಾಕ್: ರಾಜ್ಯಾದ್ಯಂತ ಆಸ್ತಿ ನೋಂದಣಿ ಸ್ಥಗಿತ

ಇ-ಖಾತಾ ಗೊಂದಲ ಬೆನ್ನಲ್ಲೇ ಆಸ್ತಿ ಖರೀದಿ, ಮಾರಾಟಗಾರರಿಗೆ ಮತ್ತೊಂದು ಶಾಕ್: ರಾಜ್ಯಾದ್ಯಂತ ಆಸ್ತಿ ನೋಂದಣಿ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ ಇ-ಖಾತಾ ಗೊಂದಲ ಬೆನ್ನಲ್ಲೇ ಸಾರ್ವಜನಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ರಾಜ್ಯಾದ್ಯಂತ ಆಸ್ತಿ ಸೇರಿದಂತೆ ಎಲ್ಲ ನೋಂದಣಿ ಸ್ಥಗಿತಗೊಂಡಿದೆ.

ಶಿಕ್ಷೆ ವಿಧಿಸುವ ಕಾಯ್ದೆಗೆ ಸಬ್ ರಿಜಿಸ್ಟ್ರಾರ್ ಗಳು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಕೈಗೊಂಡಿದ್ದಾರೆ. ಹೊಸ ನೋಂದಣಿ ತಿದ್ದುಪಡಿ ಕಾಯ್ದೆಯಲ್ಲಿ ನಕಲಿ ದಾಖಲೆ ಆಧರಿಸಿದ ನೋಂದಣಿಗೆ ಕಡಿವಾಣ ಹಾಕಲಾಗಿದೆ. ನಕಲಿ ದಸ್ತಾವೇಜು ಆಧರಿಸಿದ ನೋಂದಣಿ ಮಾಡಿದರೆ ಸಬ್ ರಿಜಿಸ್ಟ್ರಾರ್ ಗಳಿಗೆ ಮೂರು ವರ್ಷ ಶಿಕ್ಷೆ ವಿಧಿಸಲಾಗುವುದು. ಇದಕ್ಕೆ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದು ಸರ್ಕಾರದಿಂದ ಸ್ಪಷ್ಟನೆ ನಿರೀಕ್ಷಿಸಿ ನೋಂದಣಿಯನ್ನು ಸ್ಥಗಿತಗೊಳಿಸಿದ್ದಾರೆ.

ಸೋಮವಾರ ಬೆಳಗ್ಗೆಯಿಂದಲೇ ರಾಜ್ಯದಾತ್ಯಂತ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಸೇರಿದಂತೆ ಎಲ್ಲಾ ರೀತಿಯ ದಸ್ತಾವೇಜುಗಳನ್ನು ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಕರ್ನಾಟಕ ನೋಂದಣಿ ತಿದ್ದುಪಡಿ ಕಾಯ್ದೆ 2023ಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರ ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೊಸ ಸೆಕ್ಷನ್ ಪರಿಚಯಿಸುವುದರಿಂದ ಕೇಂದ್ರ ಕಚೇರಿಯಿಂದ ಸರಿಯಾದ ನಿರ್ದೇಶನಗಳು ಬರುವವರೆಗೂ ದಸ್ತಾವೇಜುಗಳ ಪರಿಶೀಲನೆ, ನೋಂದಣಿಯನ್ನು ಅನಿರ್ದಿಷ್ಟ ಅವಧಿಗೆ ಮುಂಡೂಡುತ್ತಿದ್ದೇವೆ ಎಂದು ಸಬ್ ರಿಜಿಸ್ಟ್ರಾರ್ ಗಳು ಹೇಳಿದ್ದಾರೆ. ಇದರಿಂದಾಗಿ ಆಸ್ತಿ ಮಾರಾಟಗಾರರು, ಖರೀದಿದಾರರಿಗೆ ತೊಂದರೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular