HomeKarnatakaBIG NEWS: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಬಿಎಂಪಿ ಮಾದರಿಯಲ್ಲಿ ಇ-ಆಸ್ತಿ ಜಾರಿ

BIG NEWS: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಬಿಎಂಪಿ ಮಾದರಿಯಲ್ಲಿ ಇ-ಆಸ್ತಿ ಜಾರಿ

ಬೆಳಗಾವಿ: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಬಿಎಂಪಿ ಮಾದರಿಯಲ್ಲಿ ಎ – ಖಾತಾ ಮತ್ತು ಬಿ-ಖಾತಾ ಎಂದು ಇ-ಆಸ್ತಿ ನೀಡುವ ಕಾರ್ಯವನ್ನು ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಹೇಳಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ. ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರ ಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರೆ ಮಹಾನಗರ ಪಾಲಿಕೆಗಳು /ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಹಾಗೂ ಕರ್ನಾಟಕ ಪುರಸಭೆಗಳ ಅಧಿನಿಯಮ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರ ಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಹಾಗೂ ಕರ್ನಾಟಕ ಪುರಸಭೆಗಳ ಅಧಿನಿಯಮ 1964ರಲ್ಲಿ ಅಳವಡಿಸಿಕೊಳ್ಳುವ ಸಂಬಂಧ ರಾಜ್ಯಪತ್ರದಲ್ಲಿ ರಾಜ್ಯದ ಇತರ ಮಹಾನಗರ ಪಾಲಿಕೆಗಳು /ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಪುರಸಭೆಗಳ ಅಧಿನಿಯಮ 1964 ಮತ್ತು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಕ್ಕೆ ತಿದ್ದುಪಡಿ ತರಲಾಗಿದೆ. ಅದರಂತೆ, ನಿಯಮಗಳಲ್ಲಿ ತಿದ್ದುಪಡಿ ತರಲು ಕ್ರಮ ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular