ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಹಾಗೂ ಸರ್ಕಾರದ ಅನುದಾನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಇ-ಹಾಜರಾತಿ ಕಡ್ಡಾಯಗೊಳಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಯೋಜನೆ ಅನುಷ್ಠಾನಗೊಳಿಸಲು ಅಗತ್ಯವಾದ ಕೃತಕ ಬುದ್ಧಿಮತ್ತೆ ಆಧಾರಿತ ಮೊಬೈಲ್ ಹಾಗೂ ಇತರೆ ಪರಿಕರಗಳನ್ನು ರಾಜ್ಯದ 52,686 ಶಾಲೆಗಳಲ್ಲಿ ಅಳವಡಿಸಲು ₹5 ಕೋಟಿ ಅನುದಾನ ನೀಡಲಾಗಿದೆ.
ತಂತ್ರಾಂಶದ ಪ್ರಯೋಜನಗಳು
ಎಲ್ಲಾ ಹಂತದಲ್ಲಿನ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡಿಮೆ ಸಮಯದಲ್ಲಿ ಹೊಂದಬಹುದಾಗಿದೆ ಹಾಗೂ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ನಿಖರತೆ ದೊರಕುತ್ತದೆ.ಪ್ರಸ್ತುತ ಹಾಜರಾತಿ ದಾಖಲೆಯಲ್ಲಿನ ವ್ಯವಸ್ಥೆಯಲ್ಲಿನ ನ್ಯೂನ್ಯತೆ ಸರಿಪಡಿಸಿ ನಿಖರ ಹಾಜರಾತಿಯನ್ನು ದಿನಂಪ್ರತಿ ಆಧಾರದ ಮೇಲೆ ಪಡೆಯಬಹುದಾಗಿದೆ.
ಯಾವುದೇ ಶಾಲೆಯ ಹಾಜರಾತಿಯಲ್ಲಿ ಅಸಾಧಾರಣ ಕೊರತೆಯನ್ನು ದಿನಂಪ್ರತಿ ಆಧಾರದಲ್ಲಿ ಮೇಲ್ವಿಚಾರಿಸಬಹುದಾಗಿದೆ.
ವಿವಿಧ ಪ್ರೋತ್ಸಾಹದಾಯಕ ಯೋಜನೆಗಳ ಅನುಷ್ಠಾನಕ್ಕೆ ನಿಖರ ಮಾಹಿತಿ ಲಭ್ಯವಾಗುತ್ತದೆ. ಇದರಿಂದ ಅನಗತ್ಯ ಅಥವಾ ಹೆಚ್ಚುವರಿ ಅನುಧಾನ ಹಂಚಿಕೆಯನ್ನು ತಡೆಗಟ್ಟಬಹುದು.ದಿನಂಪ್ರತಿ ಆಧಾರದಲ್ಲಿ ನಿಖರವಾದ ಶಾಲಾ ಹಾಜರಾತಿಯ ವರದಿಯನ್ನು ಹೊಂದುವುದರಿಂದ ಆಯಾ ಸಂಬಂಧಿತ ಶಾಲೆಗಳಲ್ಲಿನ ಶೈಕ್ಷಣಿಕ ವ್ಯವಸ್ಥೆಯನ್ನು ಸುಧಾರಿಸಬಹುದಾದ ನಿಟ್ಟಿನಲ್ಲಿ ಯೋಜನೆ ರೂಪಿಸಲು ಸಹಕಾರಿಯಾಗಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಹಾಗೂ ಸರ್ಕಾರದ ಅನುದಾನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಇ-ಹಾಜರಾತಿ ಕಡ್ಡಾಯಗೊಳಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
— DIPR Karnataka (@KarnatakaVarthe) June 23, 2025
ಯೋಜನೆ ಅನುಷ್ಠಾನಗೊಳಿಸಲು ಅಗತ್ಯವಾದ ಕೃತಕ ಬುದ್ಧಿಮತ್ತೆ ಆಧಾರಿತ ಮೊಬೈಲ್ ಹಾಗೂ ಇತರೆ ಪರಿಕರಗಳನ್ನು ರಾಜ್ಯದ 52,686 ಶಾಲೆಗಳಲ್ಲಿ… pic.twitter.com/9uG5O8mwiN