ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಮೇ 10ರವರೆಗೆ ಇ-ಖಾತಾ ಅಭಿಯಾನ

ಬೆಂಗಳೂರು: ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ವತಿಯಿಂದ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ಮತ್ತು ಇತರೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೇ 10ರವರೆಗೆ ಇ-ಖಾತಾ ಅಭಿಯಾನ ಕೈಗೊಳ್ಳಲಾಗಿದೆ.

ಇ-ಖಾತಾ ಪಡೆಯಲು ಸರಳ ವಿಧಾನಗಳು

ಸರ್ಕಾರದಿಂದ ವಿತರಿಸಿದ ಯಾವುದೇ ಬಗೆಯ ಗುರುತಿನ ಚೀಟಿ

ಆಸ್ತಿ ಮಾಲೀಕರ ಫೋಟೋ

ಮಾಲೀಕತ್ವ ದೃಢೀಕರಿಸುವ ನೋಂದಾಯಿತ ದಾಖಲೆಗಳು

ಸ್ವತ್ತಿನ ಋಣ ಭಾರ ಪ್ರಮಾಣ ಪತ್ರ

ಸ್ವತ್ತಿನ ಛಾಯಾಚಿತ್ರ

ಆಸ್ತಿ ತೆರಿಗೆ ಪಾವತಿಸಿದ ರಶೀದಿ

ಈ ದಾಖಲೆಗಳೊಂದಿಗೆ ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಇ-ಖಾತಾ ದಾಖಲೆಯನ್ನು ಪಡೆದುಕೊಳ್ಳಬಹುದು. ಈಗಾಗಲೇ ಇರುವ ಕೈಬರಹದ ಖಾತೆಗೆ ಇ-ಖಾತಾ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ಈ ಖಾತೆ ಪಡೆಯಲು ಯಾವುದಾದರು ಸಮಸ್ಯೆ ಇದ್ದಲ್ಲಿ ಸಹಾಯವಾಣಿ 080 23003100, ವಾಟ್ಸಾಪ್ 6366674001 ಸಂಪರ್ಕಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read