ಬೆಂಗಳೂರು : ಕಟ್ಟಡ ನಕ್ಷೆ ಮಂಜೂರಾತಿಗೆ ಇ ಖಾತಾ ಕಡ್ಡಾಯವಾಗಿದ್ದು, ಜುಲೈ 1 ರಿಂದ ಹೊಸ ನಿಯಮ ಜಾರಿಗೆ ಬರಲಿದೆ.
ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತೆ ಕಡ್ಡಾಯ ಮಾಡಲಾಗಿದೆ.ಇ-ಖಾತೆ ಕಡ್ಡಾಯಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.ಜುಲೈ 1ರಿಂದ ನಕ್ಷೆ ಮಂಜೂರಾತಿಗೆ ಇ-ಖಾತೆ ಸಲ್ಲಿಕೆ ಕಡ್ಡಾಯಗೊಳಿಸಲಾಗಿದೆ.ಆನ್ಲೈನ್ ನಲ್ಲಿ ನಂಬಿಕೆ ನಕ್ಷೆ ಸೇರಿದಂತೆ ಎಲ್ಲಾ ಅರ್ಜಿಗಳಿಗೆ ಇ-ಖಾತೆ ಅವಶ್ಯಕವಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರರಾವ್ ಆದೇಶ ಜಾರಿಗೊಳಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮತ್ತು ವಿತರಣೆ ವ್ಯವಸ್ಥೆ ಮಾಡಲಾಗಿದೆ. ಅದರ ಜತೆಗೆ ಸ್ವತ್ತುಗಳಿಗೆಇ-ಖಾತಾವನ್ನು ಆನ್ಲೈನ್ಮೂಲಕ ನೀಡಲಾಗುತ್ತಿದೆ. ಇದೀಗ ಎರಡೂ ತಂತ್ರಾಂಶವನ್ನು ಏಕೀಕರಣಗೊಳಿಸಲಾಗುತ್ತಿದೆ. ಹೀಗಾಗಿ ಕಟ್ಟಡ ನಕ್ಷೆ ಮಂಜೂರಾತಿಗೆ ಅರ್ಜಿಸಲ್ಲಿಸುವವರು ಮೊದಲು ಇ- ಖಾತಾವನ್ನು ಪಡೆದಿರಬೇಕಿದೆ.ಇ-ಖಾತಾಸಲ್ಲಿಸದ ಅರ್ಜಿಗಳನ್ನು ಕಟ್ಟಡ ನಕ್ಷೆ ಮಂಜೂರಾತಿಗೆ ಪರಿಗಣಿ ಸದಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಒಂದು ವೇಳೆ ನಕ್ಷೆ ಮಂಜೂರಾತಿ ಅರ್ಜಿಗಳು ಇ-ಖಾತಾ ಸೇರಿದಂತೆ ಇನ್ನಿತರ ದಾಖಲೆಗಳನ್ನು ಸಲ್ಲಿಸದೇ ಡೀಮ್ಸ್ ಅನುಮೋದನೆ ದೊರೆತರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಿ ನಿಯಮದಪ್ರಕಾರ ಶಿಸ್ತುಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ಬಯಸಿದಂತೆ ಬಯಲು ಅಭಿಯಾನ ಸಂಬಂಧಿಸಿದಂತೆ ದಿನಪತ್ರಿಕೆಗಳಲ್ಲಿ ಪ್ರಕಟವಾದ ವರದಿಗಳು.#BBMP #BBMPCares #DKShivakumar #bbmpchiefcommissioner pic.twitter.com/6MyzN1jG5R
— Bruhat Bengaluru Mahanagara Palike (@BBMPofficial) June 10, 2025