HomeKarnatakaಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ- ಖಾತಾ ಶೀಘ್ರ ವಿತರಣೆಗೆ ಮಹತ್ವದ ಕ್ರಮ

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ- ಖಾತಾ ಶೀಘ್ರ ವಿತರಣೆಗೆ ಮಹತ್ವದ ಕ್ರಮ

ಬೆಂಗಳೂರು: ಆಸ್ತಿ ಮಾಲೀಕರಿಗೆ ಶೀಘ್ರವಾಗಿ ಇ- ಖಾತಾ ವಿತರಣೆಗೆ ಹೆಚ್ಚುವರಿ ಸಹಾಯಕ ಕಂದಾಯ ಅಧಿಕಾರಿಗಳನ್ನು ನಿಯೋಜಿಸುವಂತೆ ಎಲ್ಲಾ 8 ವಲಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಈ ಬಗ್ಗೆ ಮಾಹಿತಿ ನೀಡಿದ್ದು, ಸಹಾಯಕ ಕಂದಾಯ ಅಧಿಕಾರಿಗಳ ಲಾಗಿನ್ ನಲ್ಲಿ ಬಾಕಿ ಇರುವ ಇ- ಖಾತಾ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ವಲಯವಾರು ಹೆಚ್ಚುವರಿ ಸಹಾಯ ಕಂದಾಯ ಅಧಿಕಾರಿಗಳನ್ನು ನಿಯೋಜಿಸಲಿದ್ದು, ಮುಂದಿನ ಒಂದು ವಾರದೊಳಗೆ ಬಾಕಿ ಇರುವ ಎಲ್ಲಾ ಅರ್ಜಿಗಳ ವಿಲೇವಾರಿ ಮಾಡಲು ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರೀಕರ ಸಮಸ್ಯೆ ಆಲಿಸಲು ಎಲ್ಲಾ ವಾರ್ಡ್ ಗಳಲ್ಲಿ ನಿಯೋಜಿಸಿರುವ ನೋಡಲ್  ಅಧಿಕಾರಿಗಳು ಪ್ರತಿ ಬುಧವಾರ ವಾರ್ಡ್ ಕಚೇರಿಗಳಲ್ಲಿ ಕುಂದು ಕೊರತೆ ಸಭೆ ನಡೆಸಲು ತಿಳಿಸಲಾಗಿದೆ. ಪ್ರತಿ ಬುಧವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಂದಾಯ ಮತ್ತು ಕುಂದು ಕೊರತೆಗಳ ಅದಾಲತ್ ನಡೆಸುವಂತೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular